ಮೈಸೂರಿನಲ್ಲಿ ದೇಗುಲಗಳ ತೆರವಿಗೆ ತಾತ್ಕಾಲಿಕ ತಡೆ ನೀಡಿದ ಜಿಲ್ಲಾಡಳಿತ…

70
firstsuddi

ಮೈಸೂರು : ದೇಗುಲಗಳ ತೆರವಿಗೆ ಜಿಲ್ಲಾಡಳಿತ ತಾತ್ಕಾಲಿಕ ತಡೆ ನೀಡಿದೆ. ಇದರಿಂದಾಗಿ ಸದ್ಯಕ್ಕೆ ಮೈಸೂರಿನ 96 ಧಾರ್ಮಿಕ ಕೇಂದ್ರಗಳು ಸೇಫ್ ಆಗಿವೆ.

2009ರಲ್ಲಿ ಪಟ್ಟಿ ಮಾಡಿರುವ ರೀತಿಯಲ್ಲಿ ಮೈಸೂರು ನಗರದಲ್ಲಿ 96 ಧಾರ್ಮಿಕ ಕಟ್ಟಡಗಳಿದ್ದು, ಅವುಗಳನ್ನು ತೆರವುಗೊಳಿಸಲು ಜಿಲ್ಲಾಡಳಿತ ಕಾರ್ಯಾಚರಣೆ ಆರಂಭಿಸಿತ್ತು. ಇದರ ಜೊತೆಗೆ ಮೈಸೂರು ಜಿಲ್ಲೆಯಲ್ಲಿರುವ ಧಾರ್ಮಿಕ ಕಟ್ಟಡಗಳನ್ನು ನೆಲಸಮಗೊಳಿಸಲು ಜಿಲ್ಲಾಡಳಿತ ತಾಲೂಕು ತಹಶೀಲ್ದಾರ್ ನೇತೃತ್ವದಲ್ಲಿ ಕಾರ್ಯಾಚರಣೆ ಆರಂಭಿಸಿತ್ತು. ಇದರ ನಿಮಿತ್ತ  ನಂಜನಗೂಡು ತಾಲೂಕಿನ ಹುಚ್ಚಗಣಿ ಗ್ರಾಮದ ಶಕ್ತಿ ದೇವತೆ ಮಹದೇವಮ್ಮ ದೇವಾಲಯವನ್ನು ನೆಲಸಮಗೊಳಿಸಿತ್ತು. ಇದಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವಿಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಜೊತೆಗೆ ಸಂಸದ ಪ್ರತಾಪ್ ಸಿಂಹ ಕೂಡ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ ದೇವಸ್ಥಾನ ತೆರವು ವಿರೋಧಿಸಿ ಜಿಲ್ಲೆಯಲ್ಲಿ ಜನಾಂದೋಲನ ಆರಂಭವಾಗಿತ್ತು.

ದೇವಸ್ಥಾನ ತೆರವಿಗೆ ಆಕ್ರೋಶ ವ್ಯಕ್ತವಾದ ಹಿನ್ನೆಲೆ ನಂಜನಗೂಡಿನ ದೇವಸ್ಥಾನವನ್ನು ತರಾತುರಿಯಲ್ಲಿ ತೆರವು ಮಾಡಿದ್ದ ಬಗ್ಗೆ ವಿವರಣೆ ಕೇಳಿ ಮೈಸೂರು ಜಿಲ್ಲಾಧಿಕಾರಿ ಹಾಗೂ ನಂಜನಗೂಡು ತಹಶೀಲ್ದಾರ್ ಗೆ ಸರ್ಕಾರದಿಂದ ನೋಟಿಸ್ ಜಾರಿ ಮಾಡಿದೆ. ಅಲ್ಲದೆ ದೇವಸ್ಥಾನಗಳ ತೆರವಿಗೆ ತೆರಳದಂತೆ ಜಿಲ್ಲಾಡಳಿತ ಅಧಿಕಾರಿಗಳಿಗೆ ಮೌಖಿಕ ಆದೇಶ ನೀಡಿದೆ.