ಮೈಸೂರಿನಲ್ಲಿ ಮತ್ತೆ ಮೂರು ಡೆಲ್ಟಾ ಪ್ಲಸ್ ವೈರಸ್ ಪ್ರಕರಣ ಪತ್ತೆ – ಹೆಚ್ಚಿದ ಆತಂಕ…

95
firstsuddi

ಮೈಸೂರು : ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ಅಬ್ಬರದ ನಡುವೆಯೂ ಇದೀಗ ಕೋವಿಡ್ ರೂಪಾಂತರ ಡೆಲ್ಟಾ ಪ್ಲಸ್ ವೈರಸ್ ಪತ್ತೆಯಾಗಿದೆ. ಬೇರೆ ರಾಜ್ಯಗಳಲ್ಲಿ ಕಾಣಿಸಿಕೊಂಡಿದ್ದ ಡೆಲ್ಟಾ ಪ್ಲಸ್ ವೈರಸ್ ಇದೀಗ ಕರುನಾಡಿಗೂ ಕಾಲಿಟ್ಟಿದೆ. ಜಿಲ್ಲೆಯಲ್ಲಿ ಮತ್ತೆ ಮೂವರಲ್ಲಿ ಡೆಲ್ಟಾ ಪ್ಲಸ್ ವೈರಸ್ ಪತ್ತೆಯಾಗಿದ್ದು, ಆತಂಕ ಎದುರಾಗಿದೆ. ನಿನ್ನೆ ಸಂಜೆ ಮೂವರಿಗೆ ಡೆಲ್ಟಾ ಪ್ಲಸ್ ದೃಢಪಟ್ಟಿದ್ದು, ಸದ್ಯ ಮೂವರು ಸೋಂಕಿತರು ಗುಣಮುಖರಾಗುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಉನ್ನತ ಮೂಲಗಳಿಂದ ಮಾಹಿತಿ ದೊರಕಿದೆ.

ಈವರೆಗೆ ಜಿಲ್ಲೆಯಲ್ಲಿ ಒಟ್ಟು ನಾಲ್ಕು ಡೆಲ್ಟಾ ಪ್ಲಸ್ ಪ್ರಕರಣಗಳು ಬೆಳಕಿಗೆ ಬಂದಿದೆ.