ಮೈಸೂರು ಗ್ಯಾಂಗ್ ರೇಪ್ ಪ್ರಕರಣ ; ಮತ್ತೋರ್ವ ಆರೋಪಿ ಬಂಧನ…

100
firstsuddi

ಮೈಸೂರು : ಆಗಸ್ಟ್ 24ರಂದು ಚಾಮುಂಡಿಬೆಟ್ಟದ ಲಲಿತಾದ್ರಿಪುರ ನಿರ್ಜನ ಪ್ರದೇಶದಲ್ಲಿ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಡಿಸಿಪಿ ಪ್ರದೀಪ್ ಗುಂಟಿ ನೇತೃತ್ವದಲ್ಲಿ ನಿನ್ನೆ ನಾಲ್ವರು ಆರೋಪಿಗಳನ್ನು ಕರೆದೊಯ್ದು ಸ್ಥಳ ಮಹಜರು ಮಾಡಲಾಗಿದೆ. ಇಂದು  ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸುವ ಮೂಲಕ ಒಟ್ಟಾರೆ ಆರು ಮಂದಿ ಕಾಮುಕರನ್ನು ಬಂಧಿಸಿದ್ದಾರೆ. ಇನ್ನೊಬ್ಬನನ್ನು ಬಂಧಿಸಲು ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.