ಮೈಸೂರು : ಮೇ.29ರಿಂದ ಜೂ.7ರ ತನಕ ಸಂಪೂರ್ಣ ಲಾಕ್ ಡೌನ್…

85
firstsuddi

ಮೈಸೂರು : ರಾಜ್ಯದಲ್ಲಿ ಕೊರೊನಾ ಅಬ್ಬರ ಹೆಚ್ಚಾಗಿರುವ ಹಿನ್ನಲೆ ಮೇ 29ರಿಂದ ಜೂನ್ 7ರ ವರೆಗೆ ಸಂಪೂರ್ಣ ಲಾಕ್ ಡೌನ್ ಜಾರಿಯಾಗಲಿದ್ದು, ವಾರದಲ್ಲಿ ಎರಡು ದಿನ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ.

ಮೇ 29ರಿಂದ ಜೂನ್ 7ರವರೆಗೆ ಜಿಲ್ಲೆಯಲ್ಲಿ ಸೋಮವಾರ ಹಾಗೂ ಗುರುವಾರ ಮಾತ್ರ ಬೆಳಗ್ಗೆ 6ರಿಂದ 12ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಹಾಗೂ ಬೆಳಗ್ಗೆ 8ರಿಂದ 12ರವರೆಗೆ ಬ್ಯಾಂಕ್ಗಳು ಹಾಗೂ ವಿಮೆ ಕಂಪನಿಗಳು ತೆರೆಯಲು ಅವಕಾಶ ನೀಡಲಾಗಿದೆ. ಹಾಲು, ಮೊಸರು ಖರೀದಿಗೆ ಯಾವುದೇ ನಿರ್ಬಂಧ ಇರುವುದಿಲ್ಲ. ವೈದ್ಯಕೀಯ ಸೇವೆ, ಹಾಪ್ ಕಾಮ್ಸ್ ಅಡಿಯಲ್ಲಿ ಬರುವ ತರಕಾರಿ ಮತ್ತು ಹಣ್ಣಿನ ಅಂಗಡಿಗಳು, ನ್ಯಾಯ ಬೆಲೆ ಅಂಗಡಿಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ರೀತಿಯ ಚಟುವಟಿಕೆಗಳಿಗೆ ಸಂಪೂರ್ಣವಾಗಿ ನಿರ್ಬಂಧವಿದೆ. ನಿಯಮ ಉಲ್ಲಂಘಿಸಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶದಲ್ಲಿ ತಿಳಿಸಿದ್ದಾರೆ.

ವಾರದಲ್ಲಿ 2 ದಿನ ಅಗತ್ಯ ವಸ್ತುಗಳಿಗೆ ಅವಕಾಶ ನೀಡಿದ್ದನ್ನು ಜನತೆ ಸದುಪಯೋಗ ಪಡಿಸಿಕೊಳ್ಳಬೇಕು. ಈ ಸಂದರ್ಭದಲ್ಲಿ ಯಾರೂ ಅಂಗಡಿಗಳ ಮುಂದೆ ಗುಂಪು ಸೇರುವ ಕೆಲಸ ಮಾಡಬಾರದು. ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಸಚಿವ ಸೋಮಶೇಖರ್ ಅವರು ಜಿಲ್ಲೆಯ ಜನತೆಯಲ್ಲಿ ಮನವಿ ಮಾಡಿದ್ದಾರೆ.