ಬೆಂಗಳೂರು : ಇದೇ ಮೊದಲ ಬಾರಿಗೆ ವಿಶ್ವದ ಅತಿ ದೊಡ್ಡ ವಿಮಾನ ಏರ್ ಬಸ್ ಎ380 ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಲಿದೆ.
ಎಮಿರೇಟ್ಸ್ ಏರ್ ಲೈನ್ಸ್ ವಿಮಾನಯಾನ ಸಂಸ್ಥೆಯು, ಅಕ್ಟೋಬರ್ 30 ರಿಂದ ಪ್ರತಿನಿತ್ಯ ಬೆಂಗಳೂರಿನಿಂದ ದುಬೈಗೆ ಸೇವೆ ನೀಡಲಾಗುವುದು ಎಂದು ತಿಳಿಸಿದೆ.
ಈ ಡಬ್ಬಲ್ ಡೆಕ್ಕರ್ ವಿಮಾನದಲ್ಲಿ ಮೂರು ದರ್ಜೆಯಲ್ಲಿ ಪ್ರಯಾಣಿಕರು ಪ್ರಯಾಣ ಮಾಡಬಹುದಾಗಿದೆ. ಎಕಾನಮಿ, ಬಿಸಿನೆಸ್, ಫಸ್ಟ್ ಕ್ಲಾಸ್ ಟಿಕೆಟ್ ಲಭ್ಯವಿದೆ.
ವಿಶ್ವದ 30 ವಿಮಾನ ನಿಲ್ದಾಣಗಳಿಗೆ ಏರ್ ಬಸ್ 380 ವಿಮಾನ ಸೇವೆಯನ್ನು ಎಮಿರೇಟ್ಸ್ ನೀಡುತ್ತಿದೆ. 1985ರಿಂದ ಎಮಿರೇಟ್ಸ್ ಭಾರತದಲ್ಲಿ ಸೇವೆ ನೀಡಲು ಆರಂಭಿಸಿದೆ.










