ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಅಮೂಲ್ಯ.

87
firstsuddi

ಬೆಂಗಳೂರು : ಕನ್ನಡದ ಖ್ಯಾತ ನಟಿ ಅಮೂಲ್ಯ ಅವರು ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್‍ವೊಂದನ್ನು ನೀಡಿದ್ದಾರೆ.

ಹೌದು, ನಟಿ ಅಮೂಲ್ಯ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ. ತಾನೂ ಪ್ರೆಗ್ನೆಂಟ್ ಎಂಬ ವಿಚಾರವನ್ನು ಸ್ವತಃ ಅಮೂಲ್ಯ ಅವರೇ ಬಹಿರಂಗಪಡಿಸಿದ್ದಾರೆ. ಪತಿ ಜಗದೀಶ್ ಜತೆ ಇರುವ ಒಂದು ವಿಶೇಷ ಫೋಟೋವನ್ನು ಹಂಚಿಕೊಂಡು, ‘ಸದ್ಯ ನಾವು ಈಗ ಇಬ್ಬರಲ್ಲ. 2022ರಲ್ಲಿ ಮೂವರಾಗುತ್ತಿದ್ದೇವೆ’ ಎಂದು ಬರೆದುಕೊಂಡಿದ್ದಾರೆ. ಅವರು ತಾಯಿ ಆಗುತ್ತಿರುವ ಸುದ್ದಿ ಕೇಳಿ ಅಭಿಮಾನಿಳು ಸಂತಸ ವ್ಯಕ್ತಪಡಿಸಿದ್ದಾರೆ.

ಬಾಲನಟಿಯಾಗಿಯೇ ಚಿತ್ರರಂಗಕ್ಕೆ ಕಾಲಿಟ್ಟ ಅಮೂಲ್ಯ ನಂತರ ‘ಚೆಲುವಿನ ಚಿತ್ತಾರ’ ಸಿನಿಮಾ ಮೂಲಕ ಹೀರೋಯಿನ್ ಆಗಿ ಚಿರಪರಿಚಿತರಾದರು. ಚಿಕ್ಕ ವಯಸ್ಸಿನಲ್ಲಿಯೇ ಸ್ಟಾರ್ ಹೀರೋಯಿನ್ ಆಗಿ ಮಿಂಚಿದರು. ಹೀಗೆ ಚಿತ್ರರಂಗದಲ್ಲಿ ಸಖತ್ ಬೇಡಿಕೆ ಇರುವಾಗಲೇ ಅವರು 2017ರಲ್ಲಿ ರಾಜಕೀಯ ಹಿನ್ನೆಲೆ ಇರುವ ಕುಟುಂಬದ ಜಗದೀಶ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. 2017ರ ಬಳಿಕ ಅಮೂಲ್ಯ ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ. ಸದ್ಯ ಈ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದೆ.