ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಜಾ ಪಟೇರಿಯಾ ಅರೆಸ್ಟ್…

60
firstsuddi

ಭೋಪಾಲ್ : ಸಂವಿಧಾನ ಉಳಿಸಲು ಪ್ರಧಾನಿ ಮೋದಿ ಹತ್ಯೆ ಮಾಡಿ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಜಾ ಪಟೇರಿಯಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಸಂವಿಧಾನ ಉಳಿಸಲು ಪ್ರಧಾನಿ ನರೇಂದ್ರ ಮೋದಿ ಹತ್ಯೆ ಮಾಡಿ ಎಂದು ರಾಜಾ ಪಟೇರಿಯಾ ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಪಟೇರಿಯಾ ಅವರ ಹೇಳಿಕೆಗಳನ್ನು ಆಧರಿಸಿ, ಮಧ್ಯಪ್ರದೇಶ ಸರ್ಕಾರವು ಮಾಜಿ ಸಚಿವರ ವಿರುದ್ಧ ಕ್ರಮಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಆದೇಶಿಸಿತ್ತು. ಅದರಂತೆ ಮಧ್ಯಪ್ರದೇಶ ಪನ್ನಾ ಜಿಲ್ಲೆ ಪವಯಿ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.

ಪ್ರಧಾನಿ ಮೋದಿ ಅವರು ಧರ್ಮದ ಆಧಾರದ ಮೇಲೆ ಜನರನ್ನ ವಿಭವಿಸುತ್ತಿದ್ದಾರೆ. ಮೋದಿ ಅವರ ಆಡಳಿತದಲ್ಲಿ ದಲಿತರು ದೊಡ್ಡ ಬೆದರಿಕೆ ಎದುರಿಸುತ್ತಿದ್ದಾರೆ. ನೀವು ಸಂವಿಧಾನ ಉಳಿಸಲು ಮೋದಿಯನ್ನು ಕೊಲ್ಲಲು ಸಿದ್ಧರಾಗಬೇಕು. ಕೊಲ್ಲುವುದೆಂದರೆ ಹತ್ಯೆ ಮಾಡುವುದಲ್ಲ. ಅವರನ್ನು ಸೋಲಿಸಬೇಕು ಎಂದು ರಾಜಾ ಪಟೇರಿಯಾ ಹೇಳಿರುವ ವಿಡಿಯೋ ವೈರಲ್ ಆಗಿತ್ತು. ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದಂತೆ, ಮಾಜಿ ಸಚಿವರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು.