ಮೋದಿ ಸರ್ಕಾರಕ್ಕೆ ಬಿಗ್ ರಿಲೀಫ್ – ರಫೇಲ್ ತೀರ್ಪು ಮರು ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ!

326
firstsuddi

ನವದೆಹಲಿ : ರಫೇಲ್ ಯುದ್ಧ ವಿಮಾನಗಳ ಖರೀದಿ ವಿಷಯಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಕ್ಲೀನ್ ಚಿಟ್ ನೀಡಿದ ತೀರ್ಪನ್ನು ಮರುಪರಿಶೀಲನೆ ನಡೆಸಬೇಕು ಎಂದು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ವಜಾಗೊಳಿಸಿದ್ದು, ಇದರಿಂದ ಕೇಂದ್ರ ಸರ್ಕಾರಕ್ಕೆ ರಫೇಲ್ ಯುದ್ದ ವಿಮಾನವನ್ನು ಖರೀದಿ ವ್ಯವಹಾರದಲ್ಲಿ ಭಾರಿ ಅಕ್ರಮ ನಡೆದಿದೆ ಎನ್ನುವ ಆರೋಪದಿಂದ ಬಿಗ್ ರಿಲೀಫ್ ಸಿಕ್ಕಂತಾಗಿದೆ. ರಫೇಲ್ ಯುದ್ದ ವಿಮಾನ ಖರೀದಿ ವ್ಯವಹಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ವಕೀಲ ಎಂ.ಎಲ್ ಶರ್ಮಾ, ವಿನೀತಾ ದಾಂಡ, ಆಪ್ ನಾಯಕ ಸಂಜಯ್ ಸಿಂಗ್, ಕೇಂದ್ರ ಸಚಿವ ಯಶವಂತ ಸಿನ್ಹಾ, ಅರುಣ್ ಶೌರಿ ಹಾಗೂ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ಸುಪ್ರೀಂ ತೀರ್ಪನ್ನು ಮರುಪರಿಶೀಲನೆ ಮಾಡಬೇಕು ಎಂದು ಅರ್ಜಿ ಸಲ್ಲಿಸಿದ್ದರು. ಈ ಕುರಿತು ಸುದೀರ್ಘ ವಿಚಾರಣೆ ನಡೆಸಿದ್ದ ಮುಖ್ಯ. ನ್ಯಾ. ರಂಜನ್ ಗೋಗಯ್ ಅವರ ನೇತೃತ್ವದ ಪೀಠ ಯಾವುದೇ ಆಧಾರವಿಲ್ಲದೆ ಭ್ರಷ್ಟಾಚಾರ ನಡೆದಿದೆ ಎಂದು ಹೇಳಿದರೆ ಎಫ್‍ಐಆರ್ ದಾಖಲಿಸುವಂತೆ ಆದೇಶ ನೀಡಲು ಸಾಧ್ಯವಾಗುವುದಿಲ್ಲ. ಈ ಅರ್ಜಿಗಳು ಮರುಪರಿಶೀಲನೆಗೆ ಯೋಗ್ಯವಲ್ಲ ಎಂದು ಹೇಳಿ ಎಲ್ಲಾ ಮರುಪರಿಶೀಲನಾ ಅರ್ಜಿಗಳನ್ನು ವಜಾಗೊಳಿಸಿದೆ.