ಮೋದಿಗೆ ಭದ್ರತಾ ಲೋಪ – ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸ್ವತಂತ್ರ ತನಿಖೆ…

63
firstsuddi

ನವದೆಹಲಿ : ಪಂಜಾಬ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉಂಟಾದ ಭದ್ರತಾ ಲೋಪ ಭದ್ರತಾ ಲೋಪಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮೂರು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸ್ವತಂತ್ರ ತನಿಖೆಗೆ ಒಪ್ಪಿಗೆ ನೀಡಿದೆ.

ಚಂಡೀಗಢದ ಡಿಜಿಪಿ, ರಾಷ್ಟ್ರೀಯ ತನಿಖಾ ಸಂಸ್ಥೆಯ ಐಜಿ, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ನ ರಿಜಿಸ್ಟ್ರಾರ್ ಜನರಲ್ ಮತ್ತು ಪಂಜಾಬ್ ನ ಎಡಿಜಿಪಿ(ಭದ್ರತೆ) ಅವರನ್ನು ತನಿಖಾ ತಂಡದಲ್ಲಿ ಸೇರಿಸಿಕೊಳ್ಳುವಂತೆ ಸುಪ್ರೀಂ ಕೋರ್ಟ್ ತಿಳಿಸಿದೆ.

ಪಂಜಾಬ್ ಸರ್ಕಾರದ ಪರ ವಾದ ಮಂಡಿಸಿದ ಅಡ್ವೊಕೇಟ್ ಜನರಲ್ ಡಿ.ಎಸ್.ಪಟ್ವಾಲಿಯ, ರಾಜ್ಯದ ಏಳು ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಹೀಗಿದ್ದಮೇಲೆ ಯಾವುದೇ ವಿಚಾರಣೆಯ ಅಗತ್ಯವಿಲ್ಲ. ಹೀಗಾಗಿ ಸ್ವತಂತ್ರ ತನಿಖೆಗೆ ಕೋರ್ಟ್ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದರು.

ಕೇಂದ್ರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ‘ಪ್ರಧಾನಿಗಳಿಗೆ ಸೂಕ್ತ ಭದ್ರತೆ ಒದಗಿಸುವಲ್ಲಿ ರಾಜ್ಯ ಸರ್ಕಾರ ಹಾಗೂ ಅಲ್ಲಿನ ಪೊಲೀಸ್ ವ್ಯವಸ್ಥೆಯ ಜವಾಬ್ದಾರಿ ಕುರಿತು ತಿಳಿಸಿದೆ. ಆದರೆ ಮೇಲ್ಸೇತುವೆ ಬಳಿ ಜನಸಂದಣಿ ಇದೆ ಎಂದು ಬೆಂಗಾವಲು ಪಡೆಗೆ ಯಾವುದೇ ಸೂಚನೆ ನೀಡಿಲ್ಲ. ಇದು ಸಂಪೂರ್ಣ ಗುಪ್ತಚರ ವೈಫಲ್ಯ’ ಎಂದು ತಿಳಿಸಿದರು. ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ ಮೂವರು ನಿವೃತ್ತ ನ್ಯಾಯಾಧೀಶರನ್ನೊಳಗೊಂಡ ಸಮಿತಿ ರಚಿಸಿ ತನಿಖೆಗೆ ಸೂಚನೆ ನೀಡಿತು.