ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭದ್ರತಾ ವೈಫಲ್ಯ ಉಂಟಾದ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಈ ಬಗ್ಗೆ ನಾಳೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಪೀಠ ವಿಚಾರಣೆ ನಡೆಸಲಿದೆ.
ಈ ರೀತಿಯ ಘಟನೆಗಳನ್ನು ನಾವು ನಿರೀಕ್ಷಿಸುವುದಿಲ್ಲ, ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ನಡೆಯಬಾರದು, ಘಟನೆ ಸಂಬಂಧ ಜಿಲ್ಲಾ ನ್ಯಾಯಾಧೀಶರಿಂದ ತನಿಖೆ ನಡೆಯಬೇಕು ಎಂದು ಹಿರಿಯ ವಕೀಲ ಮಣಿಂದರ್ ಸಿಂಗ್ ಇಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಈ ಬಗ್ಗೆ ನಾಳೆ ವಿಸ್ತೃತವಾಗಿ ವಿಚಾರಣೆ ನಡೆಸುತ್ತೇವೆ ಎಂದು ಸಿಜೆಐ ತಿಳಿಸಿದ್ದಾರೆ. ನೀವೂ ಕೇಂದ್ರ ಮತ್ತು ಪಂಜಾಬ್ ಸರ್ಕಾರಕ್ಕೆ ಅರ್ಜಿಯ ಪ್ರತಿಗಳನ್ನು ರವಾನಿಸಿ ಸಲ್ಲಿಸುವಂತೆ ಮಣಿಂದರ್ ಸಿಂಗ್ಗೆ ಸುಪ್ರೀಂಕೋರ್ಟ್ ಸೂಚಿಸಿದೆ.










