ಮೋಹಕ ತಾರೆ ರಮ್ಯಾಗೆ ಇಂದು ಹುಟ್ಟುಹಬ್ಬದ ಸಂಭ್ರಮ…

33
firstsuddi

ಸ್ಯಾಂಡಲ್ ವುಡ್ ಮೋಹಕ ತಾರೆ ರಮ್ಯಾಗೆ ಇಂದು ಹುಟ್ಟುಹಬ್ಬದ ಸಂಭ್ರಮ. 40ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ನಟಿಗೆ ಆತ್ಮೀಯರು, ಚಿತ್ರರಂಗದವರು ಸೇರಿದಂತೆ ಅಭಿಮಾನಿಗಳು ಶುಭಾಶಯ ಕೋರುತ್ತಿದ್ದಾರೆ. ಈ ಬಾರಿ ಅವರು ಜಪಾನ್ ಗೆ ಹಾರಿದ್ದು, ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ.

ರಮ್ಯಾ ಅವರು 2003 ರಲ್ಲಿ ‘ಅಭಿ’ ಚಿತ್ರದಲ್ಲಿ ಪುನೀತ್ ರಾಜ್ಕುಮಾರ್ ಜೊತೆ ನಟಿಸುವ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದರು. ‘ತನನಂ ತನನಂ’ ಮತ್ತು ‘ಸಂಜು ವೆಡ್ಸ್ ಗೀತಾ’ ಚಿತ್ರಗಳಿಗೆ ಎರಡು ಬಾರಿ ಬೆಸ್ಟ್ ಫಿಲಂಫೇರ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ರಮ್ಯಾ ಅವರು ಕರ್ನಾಟಕ ರಾಜ್ಯದ ಪ್ರದೇಶ ಕಾಂಗ್ರೆಸ್ ನ ಸಕ್ರಿಯ ಸದಸ್ಯರಾಗಿದ್ದು, ಮಂಡ್ಯ ಕ್ಷೇತ್ರದಿಂದ ಲೋಕಸಭೆ ಸದಸ್ಯರಾಗಿಯೂ ಆಯ್ಕೆಯಾಗಿದ್ದರು.

ದೊಡ್ಡ ಗ್ಯಾಪ್ ಬಳಿಕ ರಮ್ಯಾ ಸಿನಿಮಾ ರಂಗಕ್ಕೆ ಕಮ್ ಬ್ಯಾಕ್ ಮಾಡಿದ್ದು, ಡಾಲಿ ಧನಂಜಯ್ ಜೊತೆ ‘ಉತ್ತರಕಾಂಡ’ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ. ಈ ಚಿತ್ರ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ನಟಿಯಾಗಿ ಮಾತ್ರವಲ್ಲದೇ, ನಿರ್ಮಾಪಕಿ ಆಗಿಯೂ ರಮ್ಯಾ ಸಕ್ರಿಯರಾಗಿದ್ದಾರೆ. ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.