ಯಡಿಯೂರಪ್ಪ ಎಲ್ಲಿದ್ದೀಯಪ್ಪಾ ? ಹೆಚ್.ಡಿ. ಕುಮಾರಸ್ವಾಮಿ ಟಾಂಗ್…

351
firstsuddi
firstsuddi

ಬೆಂಗಳೂರು : ಜೆಡಿಎಸ್ ಕಾರ್ಯಕರ್ತರ ಸಂಘಟನಾ ಸಮಾವೇಶದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಆರೋಪಿಸಿದ್ದು, ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದೆ. ಆದರೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಸಂದರ್ಭದಲ್ಲಿ ಎಲ್ಲಿ ಹೋಗಿದ್ದಾರೆ. ಇಷ್ಟು ದಿನ ನಿಖಿಲ್ ಎಲ್ಲಿದ್ದೀಯಪ್ಪ ಎಂದು ಕೇಳುತ್ತಿದ್ದೀರಿ. ಈಗಾ ಯಡಿಯೂರಪ್ಪ ಎಲ್ಲಿದ್ದೀಯಪ್ಪ ಎಂದು ಕರೆಯಬೇಕಾಗಿದೆ. ಪ್ರವಾಹ ಹಾಗೂ ಪ್ರಕೃತಿ ವಿಕೋಪ ಸಂದರ್ಭದಲ್ಲಿ ನಾನು ಸಾಕಷ್ಟು ಕೆಲಸ ಮಾಡಿದ್ದೇನೆ ಎಂದು ಹೇಳಿದ್ದವರು, ಈಗಾ ರಾಜ್ಯದ ಜನರ ಹಿತವನ್ನು ಮರೆತು, ಪ್ರವಾಹ ಪರಿಸ್ಥಿತಿಯನ್ನು ಬದಿಗಿಟ್ಟು ಯಡಿಯೂರಪ್ಪ ಅವರು ಎಲ್ಲಿ ಹೋಗಿದ್ದಾರೆ ಎಂದು ದೂರಿದರು.