ಯಡಿಯೂರಪ್ಪ ಕುಟುಂಬದ ಒಡೆತನಕ್ಕೆ ಸೇರಿದ ಪಿಇಎಸ್ ಶಿಕ್ಷಣ ಸಂಸ್ಥೆಯ ನಾಲ್ಕು ಬಸ್ ಗಳಿಂದ ಡೀಸೆಲ್ ಕಳ್ಳತನ…

78
firstsuddi

ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಕುಟುಂಬದ ಒಡೆತನಕ್ಕೆ ಸೇರಿದ ಪಿಇಎಸ್ ಶಿಕ್ಷಣ ಸಂಸ್ಥೆಯ ನಾಲ್ಕು ಬಸ್ ಗಳಲ್ಲಿ ಡೀಸೆಲ್ ಕಳ್ಳತನ ಮಾಡಲಾಗಿದೆ. ಶಿವಮೊಗ್ಗದ ಸೋಮಿನಕೊಪ್ಪದ ಮೈತ್ರಿ ಅಪಾರ್ಟ್ ಮೆಂಟ್ ಬಳಿ ಘಟನೆ ನಡೆದಿದ್ದು, ಸಮೀಪದಲ್ಲೇ ಸೆಕ್ಯೂರಿಟಿಗಳಿದ್ದರೂ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ.

ಪಿಇಎಸ್ ಶಿಕ್ಷಣ ಸಂಸ್ಥೆಗೆ ಸೇರಿದ ಎರಡು ದೊಡ್ಡ ಬಸ್ ಮತ್ತು ಎರಡು ಮಿನಿ ಬಸ್ ಗಳನ್ನು ರಾತ್ರಿ ತಂದು ನಿಲ್ಲಿಸಲಾಗಿತ್ತು. ಬೆಳಗ್ಗೆ ಚಾಲಕ ಬಂದು ಪರಿಶೀಲಿಸಿದಾಗ ಡೀಸೆಲ್ ಟ್ಯಾಂಕ್’ಗಳ ಕ್ಯಾಪ್ ಓಪನ್ ಆಗಿರುವುದು ಬೆಳಕಿಗೆ ಬಂದಿದೆ.

ತಡರಾತ್ರಿ ವೇಳೆ ಕೃತ್ಯ ನಡೆದಿದೆ ಎನ್ನಲಾಗಿದ್ದು ಎರಡು ದೊಡ್ಡ ಬಸ್ ಮತ್ತು ಎರಡು ಮಿನಿ ಬಸ್ ಗಳಿಂದ ಸುಮಾರು 580 ಲೀಟರ್ ಡೀಸೆಲ್ ದೋಚಲಾಗಿದೆ. ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.