ವಿಜಯಪುರ: ಯತ್ನಾಳ್ ವಿರುದ್ಧ ದೂರು ನೀಡಲ್ಲ ಎಂದಿದ್ದ ಮಾಜಿ ಸಿಎಂ ಯಡಿಯೂರಪ್ಪಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ತಿರುಗೇಟು ನೀಡಿದ್ದು, ಯಡಿಯೂರಪ್ಪ ಶಕುನಿ ಇದ್ದ ಹಾಗೆ ಎಂದು ಕಿಡಿಕಾರಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಏನು ಹೇಳುತ್ತಾರೋ ಅದರ ಉಲ್ಟಾ ನಡೆದಿರುತ್ತದೆ. ವಿರೋಧ ಪಕ್ಷದ ನಾಯಕ ಆಗಲಿ ಎಂದಿದ್ದ ವಿಜಯೇಂದ್ರ ಹೈಕಮಾಂಡ್ ಬಳಿ ಪ್ಯಾಕ್ ಮಾಡಿಕೊಂಡು ಬಂದಿದ್ದ. ಅದಕ್ಕೆ ಆಗ ಯತ್ನಾಳ್ ವಿರೋಧ ಪಕ್ಷದ ನಾಯಕರಾಗಲು ತಕರಾರು ಇಲ್ಲ ಎಂದು ಹೇಳಿಕೆ ಕೊಟ್ಟಿದ್ದರು ಎಂದು ಹರಿಹಾಯ್ದರು.
ಯಡಿಯೂರಪ್ಪ ನಿನ್ನೆ ಹೇಳಿಕೆ ನೀಡಿದ್ದಾರೆ. ಈಗಾಗಲೇ ದೂರು ಕೊಟ್ಟಿದ್ದಾರೆ. ಕಂಪ್ಲೆಂಟ್ ಕೊಟ್ಟಿದ್ದಾರೆ. ಆದರೆ ಏನೂ ನಡೆಯುತ್ತಿಲ್ಲ. ಯತ್ನಾಳ್ಗೆ ನೋಟಿಸ್ ಕೊಡಲಿಲ್ಲ. ಮರ್ಯಾದೆ ಹೋಗಬಾರದು ಎಂದು ಈ ಹೇಳಿಕೆ ಕೊಡುತ್ತಿದ್ದಾರೆ. ಈ ವಿಚಾರದಲ್ಲಿ ಯಡಿಯೂರಪ್ಪ ಶಕುನಿ ಥರ ಆಡುತ್ತಿದ್ದಾರೆ ಎಂದು ದೂರಿದರು.










