ಬೆಂಗಳೂರು : ಸದಾಶಿವನಗರದ ನಿವಾಸದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಸಚಿವ ಸಚಿವ ಡಾ. ಸುಧಾಕರ್ ಅವರು, ಯುಗಾದಿ ಹಬ್ಬವಾಗಲಿ, ರಂಜಾನ್ ಆಗಲಿ ಯಾವುದಕ್ಕೂ ಕೋವಿಡ್ ಮಾರ್ಗಸೂಚಿಯಲ್ಲಿ ಬದಲಾವಣೆಯಿಲ್ಲ,ಯಾವುದೇ ವಿನಾಯಿತಿಯೂ ಇಲ್ಲ. ನಿನ್ನೆ ಒಂದೇ ದಿನ ನಗರದಲ್ಲಿ ಐದು ಸಾವಿರ ಕೇಸ್ ಬಂದಿದೆ. ರಾಜ್ಯದಲ್ಲಿ ಒಟ್ಟು ಏಳು ಸಾವಿರ ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಬಿಬಿಎಂಪಿ ಆಯುಕ್ತರು ಹಾಗೂ ನಗರಾಡಳಿತ ತಜ್ಞರ ಜೊತೆ ಸಭೆ ನಡೆಸುತ್ತೇನೆ. ಬಿಬಿಎಂಪಿ ಒಟ್ಟು ಎಂಟು ವಲಯ ರಚನೆ ಮಾಡಿದ್ದು, ಕ್ಯಾಬಿನೆಟ್ ಸಚಿವರ ನೇಮಕ ಮಾಡಿದ್ದಾರೆ. ಎಲ್ಲರನ್ನೊಳಗೊಂಡ ನಿಯೋಗ ಮಾಡಿದ್ದಾರೆ. ಸೋಂಕು ನಿಯಂತ್ರಣಕ್ಕಾಗಿ ಆಡಳಿತಾತ್ಮಕವಾಗಿ ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಅನ್ನುವುದನ್ನ ಚರ್ಚಿಸುತ್ತೇವೆ. ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ತಿಳಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. ಸಭೆಯಲ್ಲಿ ದೇಶದಲ್ಲಿರೋ ಕೊರೊನಾ ಸ್ಥಿತಿಗತಿಗಳ ಬಗ್ಗೆ ಚರ್ಚೆ ಮಾಡಲಿದ್ದಾರೆ. ಸಿಎಂ ಕೂಡ ರಾಜ್ಯದ ಸ್ಥಿತಿ ಗತಿ ಬಗ್ಗೆ ಪ್ರಧಾನಿಯವರಿಗೆ ತಿಳಿಸಲಿದ್ದಾರೆ. ನಿನ್ನೆ 50 ಲಕ್ಷಕ್ಕೂ ಹೆಚ್ಚು ಜನರಿಗೆ ಲಸಿಕೆಯನ್ನು ನೀಡಲಾಗಿದೆ. ರಾಜ್ಯದ 13 ಜಿಲ್ಲೆಗಳಲ್ಲಿ ಕೊರೊನಾ ಸೋಂಕಿನ ಪ್ರಮಾಣ ಏರುತ್ತಲೇ ಇದೆ. ಎರಡನೇ ಅಲೆ ಹೆಚ್ಚು ಹರಡದಂತೆ ಕ್ರಮ ವಹಿಸಲು ಸೂಚಿಸಲಾಗಿದೆ ಎಂದರು.










