ಯುಪಿಐ ಪಾವತಿಗಳ ಮೇಲೆ ಶುಲ್ಕ ವಿಧಿಸಲ್ಲ : ಕೇಂದ್ರ ಸ್ಪಷ್ಟನೆ…

55
firstsuddi

ನವದೆಹಲಿ : ಯುಪಿಐ ಪಾವತಿಗಳ ಮೇಲೆ ಯಾವುದೇ ಶುಲ್ಕ ವಿಧಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.

ಯುಪಿಐ, ನೆಫ್ಟ್ ನಂತಹ ಆನ್ ಲೈನ್ ಪಾವತಿಗಳಿಗೆ ಶುಲ್ಕ ವಿಧಿಸುವ ಬಗ್ಗೆ ರಿಸರ್ವ್ ಬ್ಯಾಂಕ್ ಜನರ ಅಭಿಪ್ರಾಯ ಸಂಗ್ರಹಿಸುತ್ತಿದೆ ಎಂದು ವರದಿಯಾಗಿತ್ತು. ಈ ಸುದ್ದಿಗೆ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿರುವ ಕೇಂದ್ರ ಹಣಕಾಸು ಇಲಾಖೆ, ಯುಪಿಐ ಡಿಜಿಟಲ್ ಪಾವತಿ ವ್ಯವಸ್ಥೆಯು ಸಾರ್ವಜನಿಕರಿಗೆ ಭಾರಿ ಅನುಕೂಲ ನೀಡಿದೆ. ಯುಪಿಐ ಪಾವತಿಗಳಿಗೆ ಯಾವುದೇ ಸೇವಾ ಶುಲ್ಕ ಜಾರಿ ಮಾಡುವುದಿಲ್ಲ ಎಂದುತಿಳಿಸಿದೆ.

ಕಳೆದ ವರ್ಷ ಡಿಜಿಟಲ್ ಪಾವತಿ ವ್ಯವಸ್ಥೆಗೆ ಸರ್ಕಾರ ಹಣಕಾಸಿನ ನೆರವನ್ನು ನೀಡಿದೆ. ಈ ಸಾಲಿನಲ್ಲೂ ಬಳಕೆದಾರ ಸ್ನೇಹಿ ಡಿಜಿಟಲ್ ಪಾವತಿ ಉತ್ತೇಜಿಸಲು ಮತ್ತಷ್ಟು ನೆರವನ್ನು ಘೋಷಣೆ ಮಾಡಲಾಗಿದೆ ಎಂದು ಹೇಳಿದೆ.