ಯುವತಿಯನ್ನ ಕೊಂದು ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಪಾಗಲ್ ಪ್ರೇಮಿ ಸಾವು…

58
firstsuddi

ದಾವಣಗೆರೆ : ಹಾಡಹಗಲೇ ಪ್ರೀತಿ ನಿರಾಕರಿಸಿದ ಯುವತಿಯನ್ನು ಚಾಕುವಿನಿಂದ ಇರಿದು ಕೊಂದ ಪಾಗಲ್ ಪ್ರೇಮಿಯೊಬ್ಬ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಘಟನೆ ನಿನ್ನೆ ನಗರದಲ್ಲಿ ನಡೆದಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಆರೋಪಿ ಸಾವನ್ನಪ್ಪಿದ್ದಾನೆ.

ಏನಿದು ಘಟನೆ?
ಸಾದತ್ ಅಲಿಯಾಸ್ ಚಾಂದ್ ಪೀರ್(29) ಚಾಂದ್ ಸುಲ್ತಾನಾಳನ್ನು ಪ್ರೀತಿಸುತ್ತಿದ್ದು, ಆಕೆಯನ್ನು ಮದುವೆಯಾಗಲು ಬಯಸಿದ್ದ. ಆದರೆ ಆಕೆ ಆತನ ಪ್ರೀತಿಯನ್ನು ನಿರಾಕರಿಸಿದ್ದಳು. ಅಲ್ಲದೇ ಆಕೆಯ ಕುಟುಂಬದ ಸದಸ್ಯರು ಆಕೆಗೆ ಮತ್ತೊಂದು ಹುಡುಗನೊಂದಿಗೆ ನಿಶ್ಚಿತಾರ್ಥ ಮಾಡಿದ್ದರು. ಇದರಿಂದ ಸಾದತ್ ಕೋಪಗೊಂಡಿದ್ದ.

ನಿನ್ನೆ ಸುಲ್ತಾನಾ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಸಾದತ್ ಆಕೆಯನ್ನು ಮಾತನಾಡಬೇಕು ಎಂದು ನಡು ರಸ್ತೆಯಲ್ಲಿ ನಿಲ್ಲಿಸಿದ್ದ. ಈ ವೇಳೆ ಆಕೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದ. ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ವಿಚಾರ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ ಯುವಕನನ್ನು ದಾವಣಗೆರೆ ಸಿಟಿ ಸೆಂಟ್ರಲ್ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾದತ್ ಸಾವನ್ನಪ್ಪಿದ್ದಾನೆ.