ಯೋಧರನ್ನು ಗುರಿಯಾಗಿಸಿಕೊಂಡು ಉಗ್ರರಿಂದ ಗ್ರೆನೇಡ್ ದಾಳಿ-7 ಮಂದಿ ನಾಗರೀಕರಿಗೆ ಗಾಯ…

105
firstsuddi

ಪುಲ್ವಾಮಾ : ಯೋಧರನ್ನು ಗುರಿಯಾಗಿಸಿಕೊಂಡು ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ದಾಳಿಯಲ್ಲಿ 7 ಮಂದಿ ನಾಗರೀಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಜಮ್ಮು ಕಾಶ್ಮೀರಾದ ಪುಲ್ವಾಮಾ ಜಿಲ್ಲೆಯ ಟ್ರಾಲ್ ಬಸ್ ನಿಲ್ದಾಣದ ಬಳಿ ಉಗ್ರರು ಯೋಧರನ್ನು ಗುರಿಯಾಗಿಸಿಕೊಂಡು ಏಕಾಏಕಿ ಗ್ರೆನೇಡ್ ದಾಳಿ ನಡೆಸಿ ಸ್ಥಳದಿಂದ ಪರಾರಿಯಾಗಿದ್ದು, ಘಟನೆಯಲ್ಲಿ 7 ಮಂದಿ ನಾಗರೀಕರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಪರಾರಿಯಾಗಿರುವ ಉಗ್ರರಿಗಾಗಿ ಯೋಧರು ಕಾರ್ಯಚರಣೆ ಆರಂಭಿಸಿದ್ದಾರೆ.