ರಜನಿಕಾಂತ್ ಅಭಿನಯದ “ದರ್ಬಾರ್” ಕನ್ನಡದಲ್ಲೇ ಬಿಡುಗಡೆ ಆಗಬೇಕು-ಕನ್ನಡಪರ ಸಂಘಟನೆ ಎಚ್ಚರಿಕೆ…

177
firstsuddi

ಬೆಂಗಳೂರು : ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ದರ್ಬಾರ್ ಸಿನಿಮಾ ಇಂದು ದೇಶಾದ್ಯಂತ ಬಿಡುಗಡೆಯಾಗಲಿದ್ದು, ಈ ಸಿನಿಮಾ ಕನ್ನಡದಲ್ಲೇ ರಿಲೀಸ್ ಆಗಬೇಕು ಎಂದು ಕನ್ನಡಪರ ಸಂಘಟನೆಗಳು ಚಿತ್ರಮಂದಿರದ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ. ಎ.ಆರ್. ಮುರುಗದಾಸ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ “ದರ್ಬಾರ್” ಸಿನಿಮಾ ಕನ್ನಡ, ತಮಿಳು, ತೆಲುಗು ಸೇರಿದಂತೆ ಒಟ್ಟು ಐದು ಭಾಷೆಗಳಲ್ಲಿ ತೆರೆಕಾಣುತ್ತಿದ್ದು, ನರ್ತಕಿ ಚಿತ್ರಮಂದಿರದಲ್ಲಿ ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಬಿಡುಗಡೆ ಮಾಡಲು ಸಿದ್ದತೆ ನಡೆಸಲಾಗುತ್ತಿದ್ದು, ಈ ಸಿನಿಮಾ ಕನ್ನಡದಲ್ಲೂ ಡಬ್ಬಿಂಗ್ ಆಗಿದ್ದು, ಸಿನಿಮಾ ಕನ್ನಡದಲ್ಲಿ ಡಬ್ಬಿಂಗ್ ಆಗಿರುವುದರಿಂದ ಕನ್ನಡದಲ್ಲೇ ಬಿಡುಗಡೆ ಮಾಡಿ. ಬೇರೆ ಭಾಷೆಯಲ್ಲಿ ಬಿಡುಗಡೆಯಾದರೆ ಪ್ರತಿಭಟನೆ ನಡೆಸುವುದಾಗಿ ಕನ್ನಡಪರ ಸಂಘಟನೆಗಳು ಎಚ್ಚರಿಕೆ ನೀಡಿದೆ.