ರಮೇಶ್ ಕುಮಾರ್ ರನ್ನ ಜೈಲಿಗೆ ಹಾಕಿಸೋವರೆಗೂ ನಾನು ವಿರಮಿಸೋದಿಲ್ಲ : ಸುಧಾಕರ್ ಶಪಥ…

97
firstsuddi

ಚಿಕ್ಕಬಳ್ಳಾಪುರ : ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಜೈಲಿಗೆ ಹಾಕಿಸೋವರೆಗೂ ನಾನು ವಿರಮಿಸೋದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಶಪಥ ಮಾಡಿದ್ದಾರೆ.

ನಗರದಲ್ಲಿ ವಾಲ್ಮೀಕಿ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಾಂಕ್ ಸಾಲ ವಿತರಣಾ ಕುರಿತು ಮಾತನಾಡಿದ ಅವರು, ಡಿಸಿಸಿ ಬ್ಯಾಂಕ್ನ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ಮಹಾಭಾರತದಂತಹ ಪುಸ್ತಕ ಬರೆಯಬಹದು. ಮಾಜಿ ಸ್ಪೀಕರ್ ರಮೇಶ್ ಕುಮಾರ್ ಡಿಸಿಸಿ ಬ್ಯಾಂಕ್ ರಿಂಗ್ ಮಾಸ್ಟರ್ ಆಗಿದ್ದಾರೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಗೋವಿಂದೇಗೌಡ ಕೇವಲ ಆಕ್ಟರ್ ಅಷ್ಟೇ. ಶ್ರೀನಿವಾಸಗೌಡರಿಗೂ ಡೈರೆಕ್ಷನ್ ಮಾಡೋಕೆ ಗೊತ್ತಿಲ್ಲ. ಡೈರೆಕ್ಟರ್ ಪ್ರೊಡ್ಯೂಸರ್ ಎಲ್ಲ ರಮೇಶ್ ಕುಮಾರ್ ಎಂದು ಆರೋಪಿಸಿದರು.

ಡಿಸಿಸಿ ಬ್ಯಾಂಕ್ ನಿಂದ ಕೆಜಿಎಫ್, ಶ್ರೀನಿವಾಸಪುರದಲ್ಲಿ 400-500 ಕೋಟಿ ರೂ. ಸಾಲ ಕೊಡ್ತಾರೆ. ಆದರೆ ಚಿಕ್ಕಬಳ್ಳಾಪುರ ಜಿಲ್ಲೆ ಅವರು ಏನು ಮಾಡಿದ್ರು? ಸಹಕಾರ ಕ್ಷೇತ್ರ ಸರ್ವರಿಗೂ ಸಮಪಾಲು ಸಮಬಾಳು. ರಾಜ್ಯದಲ್ಲಿ ಡಿಸಿಸಿ ಬ್ಯಾಂಕ್ ನ್ನ ರಾಜಕೀಯ ವಾಗಿ ದುರ್ಬಳಕೆ ಮಾಡಿಕೊಳ್ಳೋದ್ರಲ್ಲಿ ಮೊದಲ ಬ್ಯಾಂಕ್ ಆಗಿದೆ ಎಂದು ಟೀಕಿಸಿದರು.

ನಾನು ಡಿಸಿಸಿ ಬ್ಯಾಂಕ್ ನ ಅವ್ಯವಹಾರಗಳ ಬಗ್ಗೆ ಪಾರದರ್ಶಕ ತನಿಖೆ ಆಗಬೇಕು ಎಂದು ಅಗ್ರಹಿಸಿದ್ದೇನೆ. ಆದರೆ ನ್ಯಾಯಾಲಯಕ್ಕೆ ಹೋಗಿ ತನಿಖೆ ಬೇಡ ಅಂತ ತಡೆಯಾಜ್ಞೆ ತಂದಿದ್ದಾರೆ. ಸತ್ಯ ಹರಿಶ್ಚಂದ್ರ ಆಗಿದ್ರೆ ಯಾಕೆ ತಡೆಯಾಜ್ಞೆ ತಂದ್ರು? ಇದರಲ್ಲಿ ಗೊತ್ತಾಗುದಿಲ್ವೇ ಕಳ್ಳ ಯಾರು ಅಂತ? ಎಂದು ಪ್ರಶ್ನೆಗಳನ್ನು ಕೇಳಿದರು.

ಸತ್ಯ ಆಚೆ ಬಂದರೆ ಜೈಲಿಗೆ ಹೋಗ್ತೀರಿ ಎಂದು ನಿಮಗೆ ಗೊತ್ತಿದೆ. ಅದಕ್ಕೆ ತಡೆಯಾಜ್ಞೆ ತಂದಿದ್ದೀರಿ. ಆದರೆ ನಿಮ್ಮ ಅನಿಷ್ಟ ಭ್ರಷ್ಟಾಚಾರದ ಕೂಪವನ್ನು ಹೊರೆಗೆ ಎಳೆಯೋವರೆಗೂ ನಾನು ವಿರಮಿಸೋದಿಲ್ಲ ಎಂದು ಸವಾಲು ಹಾಕಿದ್ದಾರೆ.