ರಮೇಶ್ ಜಾರಕಿಹೊಳಿ ಅವರಿಗೆ ಕೊರೊನಾ ಸೋಂಕು ದೃಢ ; ಐಸಿಯುಗೆ ಶಿಫ್ಟ್!

94
Firstsuddi

ಬೆಳಗಾವಿ : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಗೋಕಾಕ ತಾಲ್ಲೂಕು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ರವೀಂದ್ರ ಅಂಟಿನ್ ಅವರು, ಹೊರರಾಜ್ಯಕ್ಕೆ ಹೋಗಿ ಬಂದ ಕಾರಣ ರಮೇಶ್ ಜಾರಕಿಹೊಳಿಯವರಿಗೆ ಕೋವಿಡ್ ಲಕ್ಷಣಗಳು ಕಂಡುಬಂದಿದ್ದವು. ನಿನ್ನೆ ರಾತ್ರಿ ಅವರು ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಕೋವಿಡ್ ಟೆಸ್ಟ್ ಮಾಡಲಾಗಿತ್ತು. ಅದರ ವರದಿ ಬಂದಿದ್ದು, ಸೋಂಕು ತಗಲಿರುವುದು ದೃಢಪಟ್ಟಿದೆ. ರಮೇಶ್ ಜಾರಕಿಹೊಳಿ ಅವರಿಗೆ ಬಿಪಿ ಹಾಗೂ ಶುಗರ್ ಇರುವ ಕಾರಣ ಐಸಿಯುಗೆ ಶಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಕನಿಷ್ಠ ಮೂರ್ನಾಲ್ಕು ದಿನವಾದರೂ ಅವರು ಐಸಿಯುನಲ್ಲಿರಬೇಕು. ಅವರ ಆರೋಗ್ಯ ಸ್ಥಿತಿ ನೋಡಿಕೊಂಡು ಡಿಸ್ಚಾರ್ಜ್ ಮಾಡುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನೂ ರಮೇಶ್ ಜಾರಕಿಹೊಳಿ ಅವರಿಗೆ ಕೊರೊನಾ ಸೋಂಕು ತಗುಲಿರುವ ಬೆನ್ನಲ್ಲೇ ಅವರ ಕಾರು ಚಾಲಕ ಹಾಗೂ ಅಡುಗೆ ಭಟ್ಟನಿಗೂ ಕೊರೊನಾ ಪಾಸಿಟವ್ ಬಂದಿದೆ ಎನ್ನಲಾಗಿದೆ.