ರಮೇಶ್ ಜಾರಕಿಹೊಳಿ ಸಿಡಿ ಕೇಸ್ : ಎಸ್ ಐಟಿ ತನಿಖಾ ವರದಿ ಸಲ್ಲಿಸುವಂತೆ ಹೈಕೋರ್ಟ್ ನಿರ್ದೇಶನ…

109
Firstsuddi

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಪೊಲೀಸರು ನಡೆಸಿರುವ ತನಿಖಾ ವರದಿಯನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿನ್ನೆ ನಿರ್ದೇಶನ ನೀಡಿತು.

ಸಿಡಿ ಬಹಿರಂಗ ಪ್ರಕರಣವನ್ನು ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ, ಎಸ್ ಐಟಿ ರಚಿಸಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಪಿಐಎಲ್ ಹಾಗೂ ಯುವತಿ ತನ್ನ ವಾದವನ್ನೂ ಆಲಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ, ಸಂಪೂರ್ಣ ತನಿಖಾ ವರದಿಯನ್ನು ಸಲ್ಲಿಸಿ ಎಂದು ಪೀಠ ರಾಜ್ಯ ಅಡ್ವೊಕೇಟ್ ಜನರಲ್ ಅವರಿಗೆ ಸೂಚಿಸಿತು.

ಇದಕ್ಕೆ ಕೆಲಕಾಲ ಸಮಯಾವಕಾಶ ತೆಗೆದುಕೊಂಡ ಅಡ್ವೊಕೇಟ್ ಜನರಲ್, ಸೋಮವಾರ ಬೆಳಗ್ಗೆ ವರದಿ ಸಲ್ಲಿಸುವುದಾಗಿ ತಿಳಿಸಿದರು. ಸೋಮವಾರ ತನಿಖಾ ವರದಿ ಸಲ್ಲಿಸುವುದಾಗಿ ಅಡ್ವೊಕೇಟ್ ಜನರಲ್ ಹೇಳಿಕೆ ನೀಡಿದ ಹಿನ್ನೆಲೆ ವಿಚಾರಣೆಯನ್ನು ಪೀಠ ಮಂಗಳವಾರಕ್ಕೆ ಮುಂದೂಡಿತು.