ರವೀಂದ್ರ ಕಲಾಕ್ಷೇತ್ರದಲ್ಲಿ ವಿಜಯ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ; ಸಂಜೆ ಹುಟ್ಟೂರಾದ ಪಂಚನಹಳ್ಳಿಯಲ್ಲಿ ಅಂತ್ಯಕ್ರಿಯೆ…

125
firstsuddi

ಬೆಂಗಳೂರು : ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ನಟ ಸಂಚಾರಿ ವಿಜಯ್ ಅವರು ನಿಧನರಾಗಿದ್ದು, ಇಂದು ಬೆಳಗಿನ ಜಾವ 3:34ಕ್ಕೆ ಮೃತಪಟ್ಟಿದ್ದಾರೆ ಎಂದು ಅಪೋಲೋ ಆಸ್ಪತ್ರೆ ಅಧಿಕೃತವಾಗಿ ತಿಳಿಸಿದೆ.

ಕುಟುಂಬದ ಇಚ್ಛೆಯಂತೆ ಸಂಚಾರಿ ವಿಜಯ್ ಅವರ 1 ಲಿವರ್, 2 ಕಿಡ್ನಿ, ಶ್ವಾಸಕೋಶ ಹಾಗೂ ಹೃದಯದ ನಾಲ್ಕು ಕವಾಟುಗಳನ್ನು ಅಪೊಲೊ ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಅಂಗಾಂಗ ಕಸಿಗಾಗಿ ಕಾಯುತ್ತಿದ್ದವರಿಗೆ ಕಸಿ ಮಾಡಲಾಗಿದೆ.

ಅಂಗಾಂಗ ಕಸಿ ಕಾರ್ಯ ಮುಗಿದ ನಂತರ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಮರಣೋತ್ತರ ಪರೀಕ್ಷೆ ಪೂರ್ಣಗೊಂಡ ಬಳಿಕ ಮೃತದೇಹವನ್ನು ವಿಜಯ್ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಬೆಳಗ್ಗೆ 8 ಗಂಟೆಯಿಂದ 10 ಗಂಟೆಯವರೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಂಜೆ ಸರ್ಕಾರಿ ಗೌರವಗಳೊಂದಿಗೆ ಹುಟ್ಟೂರಾದ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಪಂಚನಹಳ್ಳಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.