ರಸಗೊಬ್ಬರ ಕಾರ್ಖಾನೆಯಲ್ಲಿ ಅನಿಲ ಸೋರಿಕೆ-ಇಬ್ಬರ ಸಾವು….

117
firstsuddi

ಉತ್ತರ ಪ್ರದೇಶ : ರಸಗೊಬ್ಬರ ಕಾರ್ಖಾನೆಯೊಂದರಲ್ಲಿ ಅನಿಲ ಸೋರಿಕೆಯಾಗಿ ಇಬ್ಬರು ಅಧಿಕಾರಿಗಳು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗ್ ರಾಜ್‍ನ ಫಲ್ಪುರ್‍ನಲ್ಲಿ ಇರುವ ಭಾರತೀಯ ರಸಗೊಬ್ಬರ ಸಹಕಾರಿ ಲಿಮಿಟೆಡ್ ನಲ್ಲಿ ನಡೆದಿದೆ. ಮೃತರನ್ನು ವಿ.ಪಿ ಸಿಂಗ್(47) ಹಾಗೂ ಅಬೈ ನಂದನ್(57) ಎಂದು ಗುರುತಿಸಲಾಗಿದೆ. ಕಾರ್ಖಾನೆಯಲ್ಲಿ ತಾಂತ್ರಿಕ ದೋಷದಿಂದಾಗಿ ಅಮೋನಿಯಾ ಅನಿಲ ಸೋರಿಕೆಯಾಗಿ ಅದನ್ನು ಸೇವಿಸಿದ 13 ಮಂದಿ ಉಸಿರಾಡಲು ಸಾಧ್ಯವಾಗದೆ ಅಸ್ವಸ್ಥಗೊಂಡಿದ್ದರು. ಅವರಲ್ಲಿ ಆರು ಮಂದಿಯನ್ನು ಪ್ರಯಾಗ್ ರಾಜ್‍ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.