ಚಿತ್ತೂರು: ರಸ್ತೆ ಅಪಘಾತದಲ್ಲಿ ಮೂರು ಆನೆಗಳು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪಲಮನೇರು ಮಂಡಲದಲ್ಲಿ ನಡೆದಿದೆ.
ಚಿತ್ತೂರು-ಪಲಮನೇರು ರಾಷ್ಟ್ರೀಯ ಹೆದ್ದಾರಿಯ ಜಗಮರ್ಲ ಕ್ರಾಸ್‌ನಲ್ಲಿ ಆನೆಗಳು ರಸ್ತೆ ದಾಟುತ್ತಿದ್ದಾಗ ಟ್ರಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಮೂರು ಆನೆಗಳು ಸ್ಥಳದಲ್ಲೇ ಸಾವನ್ನಪ್ಪಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಮಾಹಿತಿ ಪಡೆದ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಆರೋಪಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಆರೋಪಿಯನ್ನು ಬಂಧಿಸಲು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.










