ರಸ್ತೆ ಗುಂಡಿ ತಪ್ಪಿಸಲು ಹೋಗಿ ಆಯತಪ್ಪಿ ಬಿದ್ದು ಬೈಕ್ ಸವಾರ ಸಾವು…

89
firstsuddi

ಬೆಂಗಳೂರು : ರಸ್ತೆ ಗುಂಡಿ ತಪ್ಪಿಸಲು ಹೋಗಿ ಆಯತಪ್ಪಿ ಕೆಳಗೆ ಬಿದ್ದು ಬೈಕ್ ಸವಾರ ಮೃತಪಟ್ಟಿರುವ ಘಟನೆ ನಗರದ ಮಂಗನಹಳ್ಳಿ ಮುಖ್ಯ ರಸ್ತೆಯಲ್ಲಿ ನಡೆದಿದೆ.

ಮೃತ ಬೈಕ್ ಸವಾರನನ್ನು ಜಯನಗರದ ನಿವಾಸಿ ಖುರ್ಷಿದ್ ಅಹ್ಮದ್ (60) ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಅನಾಹುತ ಸಂಭವಿಸಿದೆ. ಮೃತ ಖುರ್ಷಿದ್ ಅಂಗವಿಕಲರಾಗಿದ್ದರು. ಕಾಮಾಕ್ಷಿಪಾಳ್ಯ ಸಂಚಾರಿ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಇನ್ನು ಈ ಘಟನೆ ಸಂಬಂಧ ನಗರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು, ಪ್ರತಿಕ್ರಿಯೆ ನೀಡಿದ್ದು, ರಸ್ತೆ ಗುಂಡಿ ಮುಚ್ಚುವ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿದ್ದೇನೆ. ರಸ್ತೆ ಗುಂಡಿ ಮುಚ್ಚವಂತೆಯೂ ಸೂಚನೆ ನೀಡಲಾಗಿದೆ. ಸದ್ಯ ಮಳೆ ಇದೆ, ಮಳೆ ಕಮ್ಮಿಯಾದ ಮೇಲೆ ರಸ್ತೆ ಗುಂಡಿ ಮುಚ್ಚುವ ಕೆಲಸ ಆರಂಭವಾಗುತ್ತೆ ಎಂದು ತಿಳಿಸಿದ್ದಾರೆ.