ಮಂಡ್ಯ: ರಸ್ತೆ ಗುಂಡಿಗೆ ನಿವೃತ್ತ ಯೋಧಯೊಬ್ಬರು ಬಲಿಯಾಗಿರುವ ಘಟನೆ ಜಿಲ್ಲೆಯ ಕಾರೆಮನೆ ಗೇಟ್ ಬಳಿ ನಡೆದಿದೆ. ಎಸ್.ಎನ್ ಕುಮಾರ್ (39) ಮೃತ ನಿವೃತ್ತ ಯೋಧ.
ಸಾತನೂರಿನಿಂದ ಮಂಡ್ಯಗೆ ಬರುತ್ತಿದ್ದ ವೇಳೆ ಕಾರೆಮನೆ ಗೇಟ್ ಬಳಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಅವಘಡ ಸಂಭವಿಸಿದೆ. ಗುಂಡಿಯನ್ನು ತಪ್ಪಿಸಲು ಹೋಗಿ ಎದುರಿನಿಂದ ಬಂದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಕೆಳಗೆ ಬಿದ್ದ ಕುಮಾರ್ ಮೇಲೆ ಹಿಂದಿನಿಂದ ಬಂದ ಲಾರಿ ಹರಿದಿದ್ದು, ಸ್ಥಳದಲ್ಲೇ ಸಾವವನ್ನಪ್ಪಿದ್ದಾರೆ. ತಂದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
12 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತರಾಗಿದ್ದ ಕುಮಾರ್, ಬಳಿಕ ಕಾನ್ಸ್ ಟೇಬಲ್ ಹುದ್ದೆಗೆ ಆಯ್ಕೆ ಆಗಿದ್ದರು. ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










