ಮಂಗಳೂರು : ರಸ್ತೆ ಮೇಲೆ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಬೈಕ್ ಸವಾರ ಸ್ಥಳದಲ್ಲೇ ಸಜೀವ ದಹನವಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಪಡ್ಪಿನಂಗಡಿ ಬಳಿ ನಡೆದಿದೆ. ಸುಳ್ಯ ತಾಲ್ಲೂಕಿನ ಅಜ್ಜಾವರ ನಿವಾಸಿ ಬಲ್ಪ ಗ್ರಾಮದ ತಮ್ಮ ಸಂಬಂಧಿಕರ ಮನೆಯಿಂದ ಬೆಳ್ಳಂಬೆಳಗ್ಗೆ ತಮ್ಮ ದ್ವಿಚಕ್ರ ವಾಹನದಲ್ಲಿ ಹೊರಟಿದ್ದು, ಪಡ್ಪಿನಂಗಡಿ ಸಮೀಪ ಬರುತ್ತಿದ್ದಂತೆ ರಸ್ತೆಯಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದ ಪರಿಣಾಮ ಸವಾರ ಹಾಗೂ ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿವೆ. ಘಟನೆ ಸಂಭವಿಸುತ್ತಿದ್ದ ಸ್ಥಳಕ್ಕೆ ಧಾವಿಸಿದ ಬೆಳ್ಳಾರೆ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.










