ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ-ಓರ್ವ ಸ್ಥಳದಲ್ಲೇ ಸಾವು…

141
firstsuddi

ಹಾವೇರಿ : ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದು ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಹೊರವಲಯದಲ್ಲಿರುವ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ನದೀಮ್(39) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಒಟ್ಟು ಮೂರು ಮಂದಿ ಹುಬ್ಬಳ್ಳಿಯಿಂದ ಬೆಂಗಳೂರಿನ ಕಡೆಗೆ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು, ಗಾಡಿಯಲ್ಲಿದ್ದ ಮತ್ತಿಬ್ಬರಿಗೆ ಗಾಯಗಳಾಗಿದೆ. ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಳಿಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.