ರಾಕ್​ಲೈನ್ ಮಾಲ್‌ಗೆ ಬಿಬಿಎಂಪಿ ಹಾಕಿರುವ ಸೀಲ್ ಓಪನ್ ಮಾಡುವಂತೆ ಹೈಕೋರ್ಟ್ ಸೂಚನೆ…

49
firstsuddi

ಬೆಂಗಳೂರು: ರಾಕ್​ಲೈನ್ ಮಾಲ್‌ಗೆ ಬಿಬಿಎಂಪಿ ಹಾಕಿರುವ ಸೀಲ್ ಓಪನ್ ಮಾಡುವಂತೆ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದೆ.

ಮಾಲ್‌ಗೆ ಬಿಬಿಎಂಪಿ ಬೀಗ ಹಾಕಿದ್ದ ಕ್ರಮವನ್ನು ಪ್ರಶ್ನಿಸಿ ರಾಕ್​ಲೈನ್ ಮಾಲ್ ಆಡಳಿತ ಮಂಡಳಿ ಹೈಕೋರ್ಟ್‌ಗೆ ಮನವಿ ಮಾಡಿತ್ತು. ವಿಚಾರಣೆ ನಡೆಸಿದ ನ್ಯಾ. ಸುನಿಲ್ ದತ್ ಯಾದವ್ ಅವರ ಪೀಠವು ಈ ಆದೇಶ ಹೊರಡಿಸಿದೆ.

ಕಳೆದ ಬುಧವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಜಾಲಹಳ್ಳಿ ಕ್ರಾಸ್ ಬಳಿ ಇರೋ ರಾಕ್​ಲೈನ್ ಮಾಲ್‌ಗೆ ಬೀಗ ಹಾಕಿದ್ದರು. ಇದನ್ನು ಪ್ರಶ್ನಿಸಿ ರಾಕ್​ಲೈನ್ ವೆಂಕಟೇಶ್ ಅವರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಬಿಬಿಎಂಪಿ ಆದೇಶ ಪ್ರಶ್ನಿಸಲು ಪ್ರತ್ಯೇಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಹೀಗಾಗಿ ಅರ್ಜಿದಾರರಿಗೆ ಅವಕಾಶ ನೀಡಿ ರಿಟ್ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ.