ರಾಜಕೀಯ ಜೀವನಕ್ಕೆ ನಿವೃತ್ತಿ ಘೋಷಿಸಿದ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್.

172
firstsuddi

ಮೈಸೂರು : ಇಂದು 75 ನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ಅವರು ರಾಜಕೀಯ ಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ರಾಜಕೀಯ ಜೀವನದ ಎಲ್ಲಾ ಏಳು-ಬೀಳು ದಾಖಲಿಸಿದ್ದೇನೆ. ನಾನು ಆತ್ಮ ತೃಪ್ತಿಯಿಂದ ಚುನಾವಣಾ ರಾಜಕಾರಣದಿಂದ ನಿವೃತ್ತಿಯಾಗುತ್ತಿದ್ದೇನೆ. ನಾಲ್ಕು ವರ್ಷದ ಹಿಂದೆಯೇ ನಾನು ನಿವೃತ್ತಿ ಬಯಸಿದ್ದೆ. ಆದರೆ ಕೆಲ ರಾಜಕೀಯ ಬೆಳವಣಿಗೆಗಳಿಂದ ಮತ್ತೆ ಅನಿವಾರ್ಯವಾಗಿ ಸ್ಪರ್ಧೆ ಮಾಡಬೇಕಾಯಿತು. ಮುಂದೆ ನಾನು ಚುನಾವಣೆಗಳಿಗೆ ಸ್ಪರ್ಧಿಸುವುದಿಲ್ಲ. ಈ ಮಾತಿನಿಂದ ಹಿಂದೆ ಸರಿಯುವುದು ಇಲ್ಲ ಎಂದರು.