ನವದೆಹಲಿ: ರಾಜಕೀಯ ಪಕ್ಷಗಳ ನಿಧಿಯ ಬಗ್ಗೆ ಮಾಹಿತಿ ಅತ್ಯಗತ್ಯವಾಗಿದ್ದು, ಚುನಾವಣಾ ಬಾಂಡ್ ಅಸಂವಿಧಾನಿಕ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ.
ಚುನಾವಣಾ ಬಾಂಡ್ಗಳ (ಎಲೆಕ್ಟೋರಲ್) ಕಾನೂನಿನ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಿದ ಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ. ತನ್ನ ತೀರ್ಪಿನಲ್ಲಿ, ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್ಗಳನ್ನು ನಿಷೇಧಿಸಿದೆ. ಸುಪ್ರೀಂ ಕೋರ್ಟ್ ಇದನ್ನು ಅಸಂವಿಧಾನಿಕ ಎಂದು ಕರೆದಿದೆ ಮತ್ತು ಬೇರೆ ಆಯ್ಕೆಯನ್ನು ಪರಿಗಣಿಸುವಂತೆ ಸರ್ಕಾರವನ್ನು ಕೇಳಿದೆ.
ಸರ್ಕಾರ ಹಾಗೂ ಅರ್ಜಿದಾರರ ನಡುವಿನ ವಾದ-ಪ್ರತಿವಾದ ಆಲಿಸಿದ್ದ ಮುಖ್ಯ ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠವು ಕಳೆದ ಬಾಂಡ್ಗ ತೀರ್ಪು ಕಾಯ್ದಿರಿಸಿತ್ತು.
ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಕಪ್ಪುಹಣದ ವಿರುದ್ಧ ಹೋರಾಡುವ ಉದ್ದೇಶ ಮತ್ತು ದಾನಿಗಳ ಗೌಪ್ಯತೆಯನ್ನು ಕಾಪಾಡುವುದು ಯೋಜನೆಯನ್ನು ರಕ್ಷಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಚುನಾವಣಾ ಬಾಂಡ್ಗಳು ಕಪ್ಪುಹಣವನ್ನು ತಡೆಯುವ ಏಕೈಕ ಮಾರ್ಗವಲ್ಲ ಎಂದು ಹೇಳಿ ಯೋಜನೆಯನ್ನೇ ರದ್ದು ಪಡಿಸಿದೆ.
ತನ್ನ ತೀರ್ಪಿನಲ್ಲಿ ಯೋಜನೆಯು ಮಾಹಿತಿಯ ಹಕ್ಕನ್ನು ಉಲ್ಲಂಘಿಸುತ್ತದೆ. ಇದರಿಂದ ಕಪ್ಪು ಹಣ ನಿಗ್ರಹವಾಗುವುದಿಲ್ಲ ಎಂದು ತಿಳಿಸಿದೆ.










