ರಾಯಚೂರು : ರಾಜಕೀಯ ಪ್ರವೇಶ ಕುರಿತ ಎಲ್ಲಾ ಪ್ರಶ್ನೆಗಳಿಗೆ ಡಿಸೆಂಬರ್ 25ಕ್ಕೆ ಉತ್ತರ ನೀಡುತ್ತೇನೆ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ.
ಮಸ್ಕಿ ಹೊರವಲಯದ ರೆಸಾರ್ಟ್ ವೊಂದರಲ್ಲಿ ತಮ್ಮ ಬೆಂಬಲಿಗರು ಮತ್ತು ಆಪ್ತರೊಂದಿಗೆ ಸಭೆ ನಡೆಸಿ ಮಾಧ್ಯಮಗಳೊಂದಿಗೆ ಮಾತನಾಡಿದ ರೆಡ್ಡಿ, ಕಳೆದ 18 ವರ್ಷದಿಂದ ಮಸ್ಕಿಗೆ ನಾನು ಬರುತ್ತಿದ್ದೇನೆ. ರಾಜಕೀಯ ಜೀವನ ಪುನಃ ಪ್ರಾರಂಭ ಮಾಡುತ್ತಿದ್ದೇನೆ. ಸಾರ್ವಜನಿಕ ಬದುಕಿಗೆ ಬರುತ್ತಿದ್ದೇನೆ. ಹೀಗಾಗಿ ನಮ್ಮ ಆಪ್ತರೆಲ್ಲರನ್ನೂ ಮಾತನಾಡಿಸಿಕೊಂಡು ಹೋಗಲು ಮಸ್ಕಿಗೆ ಬಂದಿದ್ದೇನೆ ಎಂದರು.
ಡಿಸೆಂಬರ್ 25ರಂದು ಮಹನೀಯರು ಜನಿಸಿದ ದಿನವಾಗಿದೆ. ಡಿ.25 ರಂದು ಎಲ್ಲಾ ಮಾಹಿತಿ ನೀಡುತ್ತೇನೆ. ನನ್ನ ಜೊತೆ ಯಾರು ಇರ್ತಾರೆ ಯಾರು ಬರ್ತಾರೆ ಅನ್ನೋದನ್ನು ಹೇಳುತ್ತೇನೆ. ಎಲ್ಲಾ ಪ್ರಶ್ನೆಗಳಿಗೆ ಬೆಂಗಳೂರಿನಲ್ಲಿ ಪ್ರೆಸ್ ಮೀಟ್ ನಲ್ಲಿ ಉತ್ತರ ಸಿಗುತ್ತೆ ಎಂದು ಹೇಳುವ ಮೂಲಕ ಜನಾರ್ಧನ ರೆಡ್ಡಿ ತಮ್ಮ ರಾಜಕೀಯ ನಡೆಯ ಗುಟ್ಟು ಬಿಟ್ಟುಕೊಟ್ಟಿಲ್ಲ.










