ರಾಜಭವನದಲ್ಲಿ ಡಾ.ಅಂಬೇಡ್ಕರ್ ಪುತ್ಥಳಿ ಅನಾವರಣಗೊಳಿಸಿದ ರಾಜ್ಯಪಾಲರು.

90
firstsuddi

ಬೆಂಗಳೂರು : ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ರಾಜಭವನದಲ್ಲಿ ನೂತನವಾಗಿ ಪ್ರತಿಷ್ಠಾಪಿಸಲಾಗಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಕಂಚಿನ ಪುತ್ಥಳಿಯನ್ನು ಅನಾವರಣಗೊಳಿಸಿ, ಪುಷ್ಪನಮನ ಸಲ್ಲಿಸಿ ನಾಡಿನ ಜನತೆಗೆ ಸಮರ್ಪಿಸಿದರು.

ಇನ್ನೂ ಡಾ.ಬಿ.ಆರ್ ಅಂಬೇಡ್ಕರ್ ಅವರ ಪುತ್ಥಳಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ,ವಿಧಾನಪರಿಷತ್ ಸಭಾಪತಿ ರಘುನಾಥ್ ರಾವ್ ಮಲ್ಕಾಪೂರೆ ಮತ್ತು ಇತರರು ಕೂಡ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು. ರಾಜಭವನದ ಅಂಗಳದಲ್ಲಿರುವ ಗಾಂಧಿ ಪುತ್ಥಳಿಗೂ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.