ರಾಜಸ್ಥಾನ ವಿಧಾನಸಭಾ ಚುನಾವಣೆ ದಿನಾಂಕ ಬದಲಾಯಿಸಿದ ಭಾರತದ ಚುನಾವಣಾ ಆಯೋಗ…

57
firstsuddi

ನವದೆಹಲಿ: ಭಾರತದ ಚುನಾವಣಾ ಆಯೋಗವು ರಾಜಸ್ಥಾನ ವಿಧಾನಸಭಾ ಚುನಾವಣೆ ದಿನಾಂಕವನ್ನು ನವೆಂಬರ್ 23ರ ಬದಲು 25ಕ್ಕೆ ಬದಲಾಯಿಸಿದೆ.

ನವೆಂಬರ್ 23ರಂದು ಸಾಲು ಸಾಲು ಮದುವೆ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳು ಇರುವ ಕಾರಣ ಜೋಧ್‌ಪುರ ಬಿಜೆಪಿ ಸಂಸದ ಪಿಪಿ ಚೌಧರಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು, ಸಾಮಾಜಿಕ ಸಂಸ್ಥೆಗಳು ಮತ್ತು ಹಲವಾರು ಮಾಧ್ಯಮ ವೇದಿಕೆಗಳು ಮತದಾನದ ದಿನಾಂಕವನ್ನು ಬದಲಾಯಿಸಲು ಮನವಿ ಮಾಡಿಕೊಂಡಿದೆ. ಈ ಕಾರಣಕ್ಕೆ ರಾಜಸ್ಥಾನ ವಿಧಾನಸಭೆ ಚುನಾವಣೆಯನ್ನು ನವೆಂಬರ್ 25ಕ್ಕೆ ನಡೆಸಲು ನಿರ್ಧರಿಸಿದೆ.