ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ : ಈಶ್ವರಪ್ಪ.

78
firstsuddi

ಶಿವಮೊಗ್ಗ : ಯಾರೋ ಒಬ್ಬರ ಆರೋಪಕ್ಕೆ ನಾನು ರಾಜೀನಾಮೆ ನೀಡಲ್ಲ. ವಿನಾ ಕಾರಣ ವಿರೋಧ ಪಕ್ಷದವರು ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ನನ್ನ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಇಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ವಾಟ್ಸಪ್ ಟೆಕ್ಸ್ ಅನ್ನು ಡೆತ್ ನೋಟು ಅನ್ನಲು ಸಾಧ್ಯವಿಲ್ಲ. ಹಾಗಾಗಿ ಮೃತ ಸಂತೋಷ್ ಡೆತ್ ನೋಟ್ ಬಗ್ಗೆ ತನಿಖೆಯಾಗಬೇಕು. ತನಿಖೆಗೆ ನಾನು ಸಿದ್ಧ. ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವವಾಗುವುದಿಲ್ಲ ಎಂದರು.