ರಾಜ್ಯ ವಿಧಾನಸಭೆ ಚುನಾವಣೆ : 10 ಪೊಲೀಸ್ ಅಧಿಕಾರಿಗಳ ವರ್ಗಾವಣೆ…

64
firstsuddi

ನವದೆಹಲಿ : ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ 10 ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಚುನಾವಣಾ ಆಯೋಗ ಆದೇಶಿಸಿದೆ.

ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮತ್ತು ನ್ಯಾಯಸಮ್ಮತ ಚುನಾವಣೆಗಾಗಿ ಪೊಲೀಸ್ ಉಪ ಆಯುಕ್ತ ಸೇರಿದಂತೆ 10 ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಚುನಾವಣಾ ಆಯೋಗ ಆದೇಶಿಸಿದೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.

ಡಿಸಿಪಿ(ಉತ್ತರ) ಬೆಂಗಳೂರು, ಯಶವಂತಪುರ ಮತ್ತು ಬೆಂಗಳೂರಿನ ಎಸಿಪಿ ಹಾಗೂ ನಾಲ್ವರು ಪೊಲೀಸ್ ಇನ್ಸ್‌ ಪೆಕ್ಟರ್‌ಗಳು – ರಾಜರಾಜೇಶ್ವರಿ ನಗರ, ಯಶವಂತಪುರ, ನಂದಿನಿ ಲೇಔಟ್ ಪೊಲೀಸ್ ಠಾಣೆ ಮತ್ತು ರಾಜಗೋಪಾಲ್ ನಗರ ಪೊಲೀಸ್ ಠಾಣೆಯ ತಲಾ ಒಬ್ಬರು ಇನ್ಸ್‌ ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಲಾಗಿದೆ.

ವರ್ಗಾವಣೆಗೊಂಡಿರುವ ಅಧಿಕಾರಿಗಳನ್ನು ರಾಜ್ಯ ಸಚಿವರೊಬ್ಬರ ಇಚ್ಛೆಯ ಮೇರೆಗೆ ನಿಯೋಜಿಸಲಾಗಿದೆ. ವರ್ಗವಾದ ಅಧಿಕಾರಿಗಳು ಪ್ರತಿಯಾಗಿ ಯಾವುದೇ ದೂರು ನೀಡಿಲ್ಲ. ಚುನಾವಣೆಯನ್ನು ಉತ್ತಮವಾಗಿ ನಡೆಸಲು ಆಯೋಗ ಈ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.