ರಾಜ್ಯ ಶ್ರೇಷ್ಠ ನಟ ಪ್ರಶಸ್ತಿ ತಿರಸ್ಕರಿಸಿದ ಕಿಚ್ಚ ಸುದೀಪ್.

53

2019ರಲ್ಲಿ ತೆರೆಕಂಡ ಸಿನಿಮಾಗಳಿಗೆ ಈಗ ರಾಜ್ಯ ಪ್ರಶಸ್ತಿ ಘೋಷಣೆ ಆಗಿದ್ದು, ಇದರಲ್ಲಿ ಕಿಚ್ಚ ಸುದೀಪ್ ಅವರು ಅತ್ಯುತ್ತಮ ನಟ ಎಂಬ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಆಶ್ಚರ್ಯ ಏನೆಂದರೆ, ಸುದೀಪ್ ಅವರಿಗೆ ಪ್ರಶಸ್ತಿಯನ್ನು ಸ್ವೀಕರಿಸಲು ಇಷ್ಟವಿಲ್ಲ. ಅನೇಕ ಸೆಲೆಬ್ರಿಟಿಗಳು ಪ್ರಶಸ್ತಿ ಸ್ವೀಕರಿಸುವುದಿಲ್ಲ. ಇದಕ್ಕೆ ಅವರದ್ದೇ ಆದ ವೈಯಕ್ತಿಕ ಕಾರಣಗಳಿವೆ. ಆಮಿರ್ ಖಾನ್ ಅವರು ಯಾವುದೇ ಅವಾರ್ಡ್ ಕಾರ್ಯಕ್ರಮಗಳಿಗೂ ತೆರಳುವುದಿಲ್ಲ. ಕನ್ನಡದಲ್ಲಿ ಕಿಚ್ಚ ಸುದೀಪ್ ಕೂಡ ಇದೇ ನಿಯಮವನ್ನು ಪಾಲಿಸುತ್ತಿದ್ದಾರೆ. ಅವರು ಅವಾರ್ಡ್ ಕಾರ್ಯಕ್ರಮಗಳಿಗೆ ಅತಿಥಿಯಾಗಿ ಹೋಗಿದ್ದು ಇದೆ. ಆದರೆ, ಅವರು ಹಲವು ವರ್ಷಗಳಿಂದ ಅವಾರ್ಡ್ ಸ್ವೀಕರಿಸುವುದನ್ನು ನಿಲ್ಲಿಸಿದ್ದಾರೆ. ಪೈಲ್ವಾನ್ ಚಿತ್ರಕ್ಕಾಗಿ ಕಿಚ್ಚ ಸುದೀಪ್ ಅವರಿಗೆ ರಾಜ್ಯ ಪ್ರಶಸ್ತಿ ಬಂದಿದ್ದು, ಆದರೆ, ಇದನ್ನು ಅವರು ಸ್ವೀಕರಿಸಲಿಲ್ಲ. ಈ ನಿರಾಕರಣೆಯ ಹಿಂದೆ ಅದರದ್ದೇ ಆದ ನೋವಿದೆ ಎಂದು ಹೇಳಲಾಗುತ್ತಿದೆ.