ರಾಜ್ಯಕ್ಕೆ ಕೊರೊನಾಘಾತ-ಇಂದು ಒಂದೇ ದಿನ 5,503 ಮಂದಿಗೆ ಕೊರೊನಾ ದೃಢ…

171
firstsuddi

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ದಿನದಿಂದ ದಿನಕ್ಕೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಇಂದು ಒಂದೇ ದಿನ ರಾಜ್ಯದಲ್ಲಿ 5,503 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,12,504ಕ್ಕೆ ಏರಿಕೆಯಾಗಿದೆ. ಅಲ್ಲದೇ ಇಂದು ಒಂದೇ ದಿನ 92 ಮಂದಿ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 2,147ಕ್ಕೆ ಏರಿಕೆಯಾಗಿದೆ. ಬೆಂಗಳೂರು ಒಂದರಲ್ಲೇ 2,270 ಮಂದಿಗೆ ಸೋಂಕು ತಗುಲಿದ್ದು, 30 ಮಂದಿ ಬಲಿಯಾಗಿದ್ದಾರೆ. 1,12,504 ಮಂದಿ ಸೋಂಕಿತರ ಪೈಕಿ 42,901 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 67,448 ಮಂದಿ ಸೋಂಕಿತರು ರಾಜ್ಯದ ನಿಗಧಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.