ರಾಜ್ಯಕ್ಕೆ ಕೊರೊನಾಘಾತ-ಇಂದು ಒಂದೇ ದಿನ 3176 ಮಂದಿಗೆ ಕೊರೊನಾ ದೃಢ…

116
firstsuddi

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ದಿನದಿಂದ ದಿನಕ್ಕೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಇಂದು ಒಂದೇ ದಿನ ರಾಜ್ಯದಲ್ಲಿ 3176 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 47,253ಕ್ಕೆ ಏರಿಕೆಯಾಗಿದೆ. ಅಲ್ಲದೇ ಇಂದು ಒಂದೇ ದಿನ 87 ಮಂದಿ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 929ಕ್ಕೆ ಏರಿಕೆಯಾಗಿದೆ. ಬೆಂಗಳೂರು ಒಂದರಲ್ಲೇ 1975 ಮಂದಿಗೆ ಸೋಂಕು ತಗುಲಿದ್ದು, 60 ಮಂದಿ ಬಲಿಯಾಗಿದ್ದಾರೆ.