ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಸಾಧಾರಣ ಮಳೆ.

52

ಬೆಂಗಳೂರು : ವಾಯುಭಾರ ಕುಸಿದದಿಂದ ಕಳೆದ ಕೆಲವು ದಿನಗಳಿಂದ ಕರ್ನಾಟಕದಲ್ಲಿ ಧಾರಕಾರ ಮಳೆಯಾಗಿದ್ದು ಹಲವು ಅವಾಂತರಗಳನ್ನು ಸೃಷ್ಠಿಸಿತ್ತು. ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಇನ್ನು ಐದು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಿಗೆ ತುಂತುರು ಮಳೆಯಾಗಲಿದ್ದು ಹಾಗೂ  ಚಿಕ್ಕಮಗಳೂರು, ಹಾಸನ ಮತ್ತು ತುಮಕೂರು, ಕೊಡಗು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಹವಮಾನ ಇಲಾಕೆ ವರದಿ ಮಾಡಿದೆ.