ರಾಜ್ಯದ ನೆರೆ ಪರಿಹಾರ ನೀಡಲು ವಿಳಂಬವಾಗುವುದಕ್ಕೆ ಆರ್ಥಿಕ ಸಂಕಷ್ಟವೇ ಕಾರಣವಿರಬಹುದು : ಪೇಜಾವರ ಶ್ರೀ

193
firstsuddi

ಬಾಗಲಕೋಟೆ : ಕೇಂದ್ರ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಇದೆ. ಹೀಗಾಗಿ ರಾಜ್ಯದ ನೆರೆ ಪರಿಹಾರ ನೀಡಲು ವಿಳಂಬವಾಗುವುದಕ್ಕೆ ಆರ್ಥಿಕ ಸಂಕಷ್ಟವೇ ಕಾರಣವಿರಬಹುದು ಎಂದು ಉಡುಪಿಯ ಪೇಜಾವರ ಶ್ರೀಗಳು ಹೇಳಿದ್ದಾರೆ. ಜಮಖಂಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಮಾತ್ರವಲ್ಲದೇ ಮಹಾರಾಷ್ಟ್ರ ಹಾಗೂ ಗುಜರಾತ್‍ಗೂ ಕೇಂದ್ರ ಸರ್ಕಾರ ನೆರೆ ಪರಿಹಾರವನ್ನು ಬಿಡುಗಡೆ ಮಾಡಿಲ್ಲ. ರಾಜ್ಯ ನೆರೆ ಸಂತ್ರಸ್ಥರಿಗೆ ಬೇಗ ಪರಿಹಾರವನ್ನು ನೀಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೇನೆ. ಪತ್ರದಲ್ಲಿ ನನ್ನ ಭಾವನೆಯನ್ನು ಹೊರಹಾಕಿದ್ದೇನೆ. ಪ್ರಧಾನಿ ಮೋದಿ ಅವರು ನನ್ನ ಪತ್ರಕ್ಕೆ ಹೇಗೆ ಸ್ಪಂದಿಸುತ್ತಾರೆ ಎಂಬುವುದನ್ನು ನೋಡೋಣ. ಮೋದಿ ಅವರು ಅನೇಕ ಒಳ್ಳೆಯ ಕೆಲಸವನ್ನು ಮಾಡಿದ್ದಾರೆ. ದೇಶದಲ್ಲಿ ಅಭಿವೃದ್ದಿ ಕೆಲಸಗಳು ಆಗಿವೆ. ಆದರೆ ನೆರೆ ಪರಿಹಾರ ಮಾತ್ರ ವಿಳಂಬವಾಗುತ್ತಿದೆ. ರಾಜ್ಯಕ್ಕೆ ಪರಿಹಾರ ಹಣ ಬಿಡುಗಡೆಯಾಗುತ್ತದೆ ಎಂಬ ವಿಶ್ವಾಸ ನನಗಿದೆ ಎಂದು ತಿಳಿಸಿದರು.