ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ ಭಾರಿ ಮಳೆ ಸಾಧ್ಯತೆ-ಹವಾಮಾನ ಇಲಾಖೆ ಮುನ್ಸೂಚನೆ…

141
firstsuddi

ಬೆಂಗಳೂರು : ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ. ಉತ್ತರ ಕನ್ನಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉಡುಪಿ, ದಕ್ಷಿಣ ಕನ್ನಡ, ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರೆಯಲಿದ್ದು, ಈ ಜಿಲ್ಲೆಗಳಲ್ಲಿ ಈಗಾಗಲೇ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಹಾಗೂ ಕೊಡಗು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಅವರು ಮಾಹಿತಿ ನೀಡಿದ್ದಾರೆ.