ರಾಜ್ಯದ ಹಲವೆಡೆ ಮುಂದಿನ ಮೂರು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆ…

157
firstsuddi

ಬೆಂಗಳೂರು : ರಾಜ್ಯದ ಹಲವೆಡೆ ಮುಂದಿನ ಮೂರು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಪ್ರಾದೇಶಿಕ ವಿಭಾಗದ ನಿರ್ದೇಶಕ ಸಿ.ಎಸ್. ಪಾಟೀಲ್ ಅವರು ಮುನ್ಸೂಚನೆ ನೀಡಿದ್ದಾರೆ.
ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡು ಭಾಗದಲ್ಲೂ ತಕ್ಕಮಟ್ಟಿಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿರುವುದಾಗಿ ಅವರು ತಿಳಿಸಿದ್ದಾರೆ.
ಬೆಳಗಾವಿ, ಧಾರವಾಡ, ಗದಗ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆಯಿರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ಸೆಪ್ಟೆಂಬರ್ 9ರ ವರೆಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿರುವುದಾಗಿ ಇಲಾಖೆ ತಿಳಿಸಿದೆ.