ರಾಜ್ಯದಲ್ಲಿ 10,889 ಮಸೀದಿಗಳಿಗೆ ಲೌಡ್​​ ಸ್ಪೀಕರ್ ಬಳಸಲು ಸರ್ಕಾರ ಅನುಮತಿ…

76
firstsuddi

ಬೆಂಗಳೂರು : ರಾಜ್ಯದಲ್ಲಿ ಆಜಾನ್ ವಿರುದ್ಧ ವಿರೋಧ ಕೇಳಿ ಬಂದ ಬಳಿಕ ರಾಜ್ಯ ಸರ್ಕಾರ ಪರವಾನಗಿ ಇಲ್ಲದೇ ಲೌಡ್​​ ಸ್ಪೀಕರ್ ಬಳಸುವಂತಿಲ್ಲ ಎಂದು ನಿರ್ಬಂಧ ಹೇರಿತ್ತು. ಇದೀಗ ರಾಜ್ಯ ಸರ್ಕಾರ ಪರವಾನಿಗೆ ನೀಡಿ 10,889 ಮಸೀದಿಗಳಿಗೆ ಲೌಡ್​​ ಸ್ಪೀಕರ್ ಬಳಸಲು ಅನುಮತಿ ನೀಡಿದೆ.

ಪರವಾನಿಗೆ ನೀಡಲು ಮಸೀದಿ, ದೇವಾಲಯ, ಚರ್ಚ್ ಗಳಿಗೆ ಅರ್ಜಿ ಸಲ್ಲಿಸಲು ಸರ್ಕಾರ ಅವಕಾಶ ನೀಡಿತ್ತು. ಪರವಾನಗಿ ನೀಡುವ ಅಧಿಕಾರವನ್ನು ಸರ್ಕಾರ ರಾಜ್ಯ ಪೊಲೀಸರಿಗೆ ನೀಡಿತ್ತು. ಈ ಹಿನ್ನೆಲೆ ಮಂದಿರ, ಮಸೀದಿ, ಚರ್ಚ್ ಗಳಿಂದ 17 ಸಾವಿರಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿದ್ದವು.

17 ಸಾವಿರದ 850 ಅರ್ಜಿಗಳನ್ನು ಪರಿಶೀಲಿಸಿ ಸದ್ಯ 10 ಸಾವಿರ ಅರ್ಜಿದಾರರಿಗೆ ಲೌಡ್ ಸ್ಪೀಕರ್ ಬಳಸಲು ಸರ್ಕಾರ ಅನುಮತಿ ನೀಡಿದೆ. 450 ರೂಪಾಯಿ ಶುಲ್ಕ ಪಡೆದು ಲೌಡ್ ಸ್ಪೀಕರ್ ಬಳಕೆಗೆ ಅನುಮತಿ ಪಡೆಯಲಾಗಿತ್ತು. ಈ ಪೈಕಿ ಬೆಂಗಳೂರಿನಲ್ಲಿ 1,841 ಮಸೀದಿಗಳಿಗೆ ಅನುಮತಿ ನೀಡಲಾಗಿದೆ. ರಾಜ್ಯಾದ್ಯಂತ ಮೂರು ಸಾವಿರಕ್ಕೂ ಹೆಚ್ಚು ಹಿಂದೂ ದೇವಾಲಯ, 1,400ಕ್ಕೂ ಹೆಚ್ಚು ಚರ್ಚ್ ಗಳಿಗೆ ಸರ್ಕಾರ ಅನುಮತಿ ನೀಡಿದೆ.

ನಿಯಮಾವಳಿಗಳು :
• ಬೆಳಗ್ಗೆ 6 ರಿಂದ ರಾತ್ರಿ 10 ರವರೆಗೆ ಲೌಡ್ ಸ್ಪೀಕರ್ ಬಳಸಬೇಕು.
• ನಿಯಮಿತ ಡೆಸಿಬಲ್ ಮಾತ್ರ ಬಳಸಬೇಕು.
• ರೆಸಿಡೆನ್ಸಿಯಲ್, ಕಮರ್ಷಿಯಲ್, ಕೈಗಾರಿಕಾ ಪ್ರದೇಶಗಳ ಅನುಗುಣವಾಗಿ ಡೆಸಿಬಲ್ ಅಳವಡಿಕೆ
• ಡೆಸಿಬಲ್ ನಿಯಂತ್ರಿಸುವ ಉಪಕರಣ ಅಳವಡಿಕೆ ಕಡ್ಡಾಯ.
• ಪೊಲೀಸರು ಸೂಚಿಸಿರುವಷ್ಟು ಮಾತ್ರ ಲೌಡ್ ಸ್ಪೀಕರ್ ಬಳಸಬೇಕು.