ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಅ.3ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನಾಳೆಯಿಂದ ಶಾಹೀನ್ ಚಂಡಮಾರುತ ಅಪ್ಪಳಿಸುವ ಹಿನ್ನೆಲೆಯಲ್ಲಿ ಇಂದು ಕರ್ನಾಟಕದಲ್ಲಿ ಮಳೆ ಹೆಚ್ಚಾಗಲಿದೆ. ಇಂದಿನಿಂದ ಅ. 3ರವರೆಗೂ ಕರ್ನಾಟಕದ ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ವರುಣನ ಆರ್ಭಟವಿರಲಿದೆ.
ಇಂದಿನಿಂದ 4 ದಿನಗಳ ಕಾಲ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ಬೀದರ್, ಕಲಬುರ್ಗಿ, ವಿಜಯಪುರದಲ್ಲಿ ಇಂದಿನಿಂದ ಅ.3ರ ವರೆಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.










