ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 308 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 6824 ಕ್ಕೆ ಏರಿಕೆಯಾಗಿದೆ. ಅಲ್ಲದೇ ಮಹಾಮಾರಿ ಕೊರೊನಾ ಸೋಂಕಿಗೆ ಇಂದು ಮೂವರು ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಮೃತರ ಸಂಖ್ಯೆ 81ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಬಿಡುಗಡೆಯಾದ ಹೆಲ್ತ್ ಬುಲೆಟಿನ್‍ನಲ್ಲಿ ಇಂದು ಕಲಬುರಗಿಯಲ್ಲಿ 67, ಯಾದಗಿರಿ 52, ಬೀದರ್ 42, ಬೆಂಗಳೂರು ನಗರ 31, ದಕ್ಷಿಣ ಕನ್ನಡ 30, ಧಾರವಾಡ 20, ಉಡುಪಿ 14, ಹಾಸನ 11, ಬಳ್ಳಾರಿ 11, ವಿಜಯಪುರ 06, ರಾಯಚೂರು, ಉತ್ತರಕನ್ನಡ ತಲಾ 5, ಕೋಲಾರ 04, ದಾವಣಗೆರೆ 03, ಮಂಡ್ಯ, ಹಾವೇರಿಯಲ್ಲಿ ತಲಾ 02,ಮೈಸೂರು, ಬಾಗಲಕೋಟೆ, ರಾಮನಗರ ಜಿಲ್ಲೆಯಲ್ಲಿ ತಲಾ 1 ಕೊರೊನಾ ಪ್ರಕರಣ ದಾಖಲಾಗಿದ್ದು, ರಾಜ್ಯದಲ್ಲಿ 6824 ಮಂದಿ ಸೋಂಕಿತರ ಪೈಕಿ 3,648ಮಂದಿ ಸೋಂಕಿತರು ಸೋಂಕಿನಿಂದ ಗುಣಮುಖರಾಗಿದ್ದು, 3,029ಮಂದಿ ಸೋಂಕಿತರು ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.










