ರಾಜ್ಯದಲ್ಲಿ ಇಂದು ಮತ್ತೆ 15 ಕೊರೊನಾ ಪ್ರಕರಣ ಪತ್ತೆ-ಸೋಂಕಿತರ ಸಂಖ್ಯೆ 247ಕ್ಕೆ ಏರಿಕೆ…

164
firstsuddi

ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಇಂದು ಮತ್ತೆ 15 ಕೊರೊನಾ ಪ್ರಕರಣ ದಾಖಲಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 247ಕ್ಕೆ ಏರಿಕೆಯಾಗಿದೆ. ಧಾರವಾಡ-4, ಮಳವಳ್ಳಿ-3, ಬೀದರ್-2, ಬಾಗಲಕೋಟೆ, ರಾಯಭಾಗ, ಬೆಂಗಳೂರು ನಗರ ಹಾಗೂ ದೊಡ್ಡಬಳ್ಳಾಪುರದಲ್ಲಿ ತಲಾ ಒಂದೊಂದು ಪ್ರಕರಣ ದಾಖಲಾಗಿದೆ.