ರಾಜ್ಯದಲ್ಲಿ ಇನ್ನೂ 5 ದಿನ ಮುಂದುವರಿಯಲಿದೆ ವರುಣನ ಅಬ್ಬರ…

95
firstsuddi

ಬೆಂಗಳೂರು : ರಾಜ್ಯದಲ್ಲಿ ಮುಂದಿನ ಐದು ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ನಾಳೆಯಿಂದ ಮೂರು ದಿನ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಆಗಸ್ಟ್ 3, 4ರಂದು ಹಾಗೂ ಮಂಡ್ಯ ಮತ್ತು ರಾಮನಗರದಲ್ಲಿ ಆಗಸ್ಟ್ 4 ರಂದು ಭಾರಿ ಮಳೆ ಬೀಳುವ ಮುನ್ಸೂಚನೆ ಹಿನ್ನೆಲೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ಧಾರವಾಡ, ಗದಗ, ಬಳ್ಳಾರಿ, ಮಂಡ್ಯ, ರಾಮನಗರದಲ್ಲಿ ಆಗಸ್ಟ್ 2 ರಿಂದ 4ರವೆರೆಗೆ ಹಾಗೂ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಬಾಗಲಕೋಟೆ, ವಿಜಯಪುರ ಮತ್ತು ಕಲಬುರಗಿಯಲ್ಲಿ ಆಗಸ್ಟ್ 4ರಂದು ಯೆಲ್ಲೋ ಅಲರ್ಟ್ ಇರಲಿದೆ. ರಾಜ್ಯದ ಉಳಿದೆಡೆ ಚದುರಿದಂತೆ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.