ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡದಂತೆ ನೋಡಿಕೊಂಡಿದ್ದೇವೆ, ಮುಂದೆಯೂ ಕಾಪಾಡುತ್ತೇವೆ : ಸಿಎಂ.

77
firstsuddi

ಬೆಂಗಳೂರು : ಹಿಜಾಬ್, ಹಲಾಲ್ ವಿಚಾರಗಳಿಂದಾಗಿ ರಾಜ್ಯದಲ್ಲಿ ಸಂಘರ್ಷಮಯ ವಾತಾವರಣದಲ್ಲಿಯೂ ಇದುವರೆಗೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗಿಲ್ಲ. ಕಾನೂನು ಸುವ್ಯವಸ್ಥೆ ಹದಗೆಡದಂತೆ ನೋಡಿಕೊಂಡಿದ್ದೇವೆ. ಮುಂದೆಯೂ ಕಾನೂನು ಸುವ್ಯವಸ್ಥೆ ಕಾಪಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಯುಗಾದಿಗೆ ಮಾಂಸ ಖರೀದಿಸುವ ವಿಚಾರದ ಕುರಿತು ಹಲಾಲ್ ವಿರೋಧಿ ಅಭಿಯಾನ ನಡೆದಿದೆ. ಎಲ್ಲ ಸಂಘಟನೆಗಳು ಹಲವಾರು ವಿಚಾರದಲ್ಲಿ ಬ್ಯಾನ್ ಮಾಡುತ್ತಲೇ ಇರುತ್ತವೆ. ಆದರೆ, ಇದಕ್ಕೆಲ್ಲ ಸರ್ಕಾರ ತನ್ನ ನಿಲುವನ್ನು ಹೇಳುತ್ತಾ ಇರಲು ಆಗಲ್ಲ. ಯಾವಾಗ ನಿಲುವು ವ್ಯಕ್ತಪಡಿಸಬೇಕೋ ಆಗ ವ್ಯಕ್ತಪಡಿಸಲಿದ್ದೇವೆ. ರಾಜ್ಯದಲ್ಲಿ ಶಾಂತಿ, ಅಭಿವೃದ್ಧಿ, ಸಾಮಾನ್ಯ ವ್ಯಕ್ತಿ ಭದ್ರತೆ ನಮ್ಮ ಸರ್ಕಾರದ ಆದ್ಯತೆಯಾಗಿದೆ. ಇದುವರೆಗೂ ಕಾನೂನು ವ್ಯವಸ್ಥೆಗೆ ಧಕ್ಕೆಯಾಗದಂತೆ ನೋಡಿಕೊಂಡಿದ್ದು, ಮುಂದೆಯೂ ಕಾನೂನು ಸುವ್ಯವಸ್ಥೆ ಕಾಪಾಡುತ್ತೇವೆ ಎಂದರು.

ಸರ್ಕಾರದ ನಡೆ ಖಂಡಿಸಿ ಪ್ರಗತಿಪರರಿಂದ ಸಿಎಂಗೆ ಪತ್ರದ ಬಗ್ಗೆ ಮಾತನಾಡಿದ ಅವರು ಪ್ರಗತಿಪರರ ಪತ್ರದ ವಾಸ್ತವಾಂಶ ಅರಿತು ನಿರ್ಧಾರ ಕೈಗೊಳ್ಳುತ್ತೇನೆ. ಅದರ ಆಧಾರದಲ್ಲಿ ಬರುವ ದಿನಗಳಲ್ಲಿ ಯಾವ ರೀತಿ ಪರಿಸ್ಥಿತಿ ನಿಭಾಯಿಸಬೇಕೆಂದರು.